ಭಾನುವಾರ, ಡಿಸೆಂಬರ್ 4, 2022
19 °C

ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಕೈದಿ: ಆಸ್ಪತ್ರೆಯಲ್ಲಿ ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಶನಿವಾರ ರಾತ್ರಿ ನೇಣು ಹಾಕಿಕೊಂಡ  ವಿಚಾರಣಾಧೀನ ಕೈದಿ ಭಾನುವಾರ ನಸುಕಿನಲ್ಲಿ ಸಾವಿಗೀಡಾದರು.

ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಬಚ್ಚನಕೇರಿ ಗ್ರಾಮದ ಮಂಜುನಾಥ ನಾಯ್ಕರ (20) ಸಾವಿಗೀಡಾದವರು.

ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಗ್ರಾಮವೊಂದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಡಿ ಯುವಕನನ್ನು ಬಂಧಿಸಲಾಗಿತ್ತು. ಮೂರು ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಮಂಜುನಾಥ ಜೈಲು ಸೇರಿದ್ದರು.

ಶನಿವಾರ ರಾತ್ರಿ ಹಿಂಡಲಗಾ ಜೈಲಿನಲ್ಲಿ ಪಾಳುಬಿದ್ದ ಕೊಠಡಿಗೆ ಹೋದ ಮಂಜುನಾಥ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಅದನ್ನು ಗಮನಿಸಿದ ಪೊಲೀಸರು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು. ಭಾನುವಾರ ಬೆಳಿಗ್ಗೆ ಅವರು ಚಿಕಿತ್ಸೆಗೆ ಸ್ಪಂದಿಸಿದೇ ಕೊನೆಯುಸಿರೆಳೆದರು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿ ‌ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು