ಬೆಳಗಾವಿ: ‘ಮಹಾರಾಷ್ಟ್ರದಲ್ಲಿ ಬಂಧಿತನಾಗಿರುವ ಮಾದಕವಸ್ತು ಮಾರಾಟಗಾರ ಲಿಂಗರಾಜ್ ಕಣ್ಣಿ ಇವರು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ. ರಾಜ್ಯದಲ್ಲಿ ಪ್ರಿಯಾಂಕ್ ಖರ್ಗೆ ಅವರೇ ಮಾದಕವಸ್ತು ಮಾರಾಟಗಾರರ ಕಿಂಗ್ಪಿನ್ ಆಗಿದ್ದಾರೆ’ ಎಂದು ಬಿಜೆಪಿ ಮುಖಂಡ ಎಂ.ಬಿ.ಝಿರಲಿ ಆರೋಪಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಖರ್ಗೆ ಅವರ ಆಪ್ತ ಸಹಾಯಕ ಮತ್ತು ಕಾಂಗ್ರೆಸ್ನ ಕಲಬುರಗಿ ದಕ್ಷಿಣ ಬ್ಲಾಕ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಮಾದಕವಸ್ತು ಮಾರಾಟ ಆರೋಪದಡಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಮಾದಕವಸ್ತು ಮಾಫಿಯಾ ಸಕ್ರಿಯವಾಗಿದೆ. ಈ ಹಾವಳಿ ಶಾಲೆ– ಕಾಲೇಜುಗಳ ಆವರಣವನ್ನೂ ವ್ಯಾಪಿಸಿದೆ. ಕಲಬುರಗಿಯಲ್ಲಿ ಪೊಲೀಸ್ ರಕ್ಷಣೆಯಲ್ಲಿ ಕಳ್ಳಸಾಗಣೆ ವ್ಯವಹಾರ ನಡೆಯುತ್ತಿದೆ’ ಎಂದು ದೂರಿದರು.

‘ಕಲಬುರಗಿಯಲ್ಲಿ ಎರಡ್ಮೂರು ತಿಂಗಳ ಹಿಂದೆ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ಆದರೆ, ಆಗ ಯಾರ ಮೇಲೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಈಗ ನಿರಾತಂಕವಾಗಿ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ’ ಎಂದೂ ಆರೋಪಿಸಿದರು.

‘ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗಾಗಿ ₹50 ಕೋಟಿ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ವಿರೋಧ ಪಕ್ಷದ ಶಾಸಕರನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗಷ್ಟೇ ಅನುದಾನ ಘೋಷಿಸಿರುವುದು ಪಕ್ಷದೊಳಗಿನ ಆಂತರಿಕ ತಿಕ್ಕಾಟ ಹತ್ತಿಕ್ಕುವ ಉದ್ದೇಶವಾಗಿದೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.