ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಭಾಗಿ
Last Updated 24 ಫೆಬ್ರುವರಿ 2021, 14:46 IST
ಅಕ್ಷರ ಗಾತ್ರ

ಗೋಕಾಕ: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಲ್ಲಿ ಗೋಕಾಕ ಮತ್ತು ಅರಭಾವಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

‘ತಿದ್ದುಪಡಿ ಮಾಡಿರುವ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ‌ಕಳೆದ ಮೂರು ತಿಂಗಳಿನಿಂದ ರೈತರು ಚಳವಳಿ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಅವರ ಬಗ್ಗೆ ತಾತ್ಸಾರ ಮನೋಭಾವ ತಳೆದಿದೆ. ದಿನ ನಿತ್ಯ ಏರಿಕೆಯಾಗುತ್ತಿರುವ ತೈಲ ಬೆಲೆ ನಿಯಂತ್ರಿಸುವಲ್ಲೂ ಸಂಪೂರ್ಣ ವೈಫಲ್ಯವನ್ನು ಸರ್ಕಾರ ಕಂಡಿದೆ. ಇದರಿಂದ ಜನಸಾಮಾನ್ಯರಿಗೆ ಜೀವನ ದುಸ್ತರವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದರು. ರಸ್ತೆ ತಡೆ ಬಳಿಕ, ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.

‘ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತರ ಬೆನ್ನೆಲುಬು ಮುರಿಯಲು ಹಾಗೂ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೂರು ಕೃಷಿ ಕಾನೂನುಗಳನ್ನು ತಂದಿದೆ. ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ನಡೆಸಿದೆ. ಇದು ಖಂಡನೀಯ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿದಿದ್ದರೂ ಪ್ರೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಏರುಗತಿಯಲ್ಲೇ ಇದೆ’ ಎಂದು ದೂರಿದರು.

‘ರೈತ ವಿರೋಧಿ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯಬೇಕು. ತೈಲ ದರ ಇಳಿಕೆಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಕ್ಕಳಾದ ರಾಹುಲ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಗಮನಸೆಳೆಯಿತು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ಅರವಿಂದ ದಳವಾಯಿ, ನಜೀರ ಶೇಖ, ವಿವೇಕ ಜತ್ತಿ, ಬಸವರಾಜ ಹೊಳೆಯಾಚೆ, ಪದಾಧಿಕಾರಿಗಳಾದ ಪ್ರಕಾಶ ಡಾಂಗೆ, ಲಗಮಣ್ಣ ಕಳಸನ್ನವರ, ಪಕ್ಷದ ಮೂಡಲಗಿ ಬ್ಲಾಕ್ ಅಧ್ಯಕ್ಷ ಗುರುರಾಜ ಪೂಜೇರಿ, ಕಲ್ಲಪ್ಪಗೌಡ ಲಕ್ಕಾರ, ಇಮ್ರಾನ ತಪಕೀರ, ಹಣಮಂತ ಗೋಪಾಳಿ, ಪರಸಪ್ಪ ತಿಮ್ಮಯ್ಯನವರ, ಮಂಜುಳಾ ರಾಮಗಾನಟ್ಟಿ, ಕಲ್ಪನಾ ಜೋಶಿ, ನೇಹಾ ಹೂಲಿಕಟ್ಟಿ, ಈರಣ್ಣ ಜನ್ಮಟ್ಟಿ, ಪ್ರವೀಣ ಶಿಪ್ರಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT