ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಸಮಸ್ಯೆ ನಿವಾರಣೆಗೆ ಸಂಶೋಧನೆ ಪೂರಕವಾಗಿರಲಿ’

Published 5 ಜೂನ್ 2024, 14:58 IST
Last Updated 5 ಜೂನ್ 2024, 14:58 IST
ಅಕ್ಷರ ಗಾತ್ರ

ಬೆಳಗಾವಿ: ‘ಸಂಶೋಧನೆಗಳು ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿರಬೇಕು’ ಎಂದು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.

ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿಗಳ ಜೊತೆ ಚರ್ಚೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸರ್ಕಾರ ಮತ್ತು ವಿಶ್ವವಿದ್ಯಾಲಯದಿಂದ ಹಲವು ಸೌಕರ್ಯ, ಶಿಷ್ಯವೇತನ ನೀಡಲಾಗುತ್ತದೆ. ಜವಾಬ್ದಾರಿಯಿಂದ ಸಂಶೋಧನಾ ಅಧ್ಯಯನ ಮಾಡಬೇಕು. ವಿವಿಧ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಕುರಿತು ಅಭ್ಯಸಿಸಬೇಕು’ ಎಂದರು.

ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ ಪೋತಪ್ರಗಾಧ, ‘ಸಂಶೋಧನಾ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಶ್ರದ್ಧೆ ಇರಬೇಕು. ಆಗ ಸಂಶೋಧನೆಗಳು ಪರಿಣಾಮಕಾರಿಯಾಗಿ ಪೂರ್ಣಗೊಳ್ಳುತ್ತವೆ. ಸಾಮಾಜಿಕ ಕಳಕಳಿಯುಳ್ಳ ಮತ್ತು ಪ್ರಚಲಿತ ವಿಷಯಗಳನ್ನು ಆಧರಿಸಿ ಸಂಶೋಧನೆ ಕೈಗೊಳ್ಳಬೇಕು’ ಎಂದರು.

ಪ್ರೊ.ಡಿ.ಎನ್.ಪಾಟೀಲ, ಪ್ರೊ.ವಿಶ್ವನಾಥ ಆವಟಿ, ಉಪ ಕುಲಸಚಿವ ಡಿ.ಕೆ.ಕಾಂಬ್ಳೆ, ಶೀತಲ್‌  ಅಕ್ಕೋಳೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT