ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಡರ್‌ಗ್ರೌಂಡ್ ನಿರ್ಮಾಣಕ್ಕೆ ಕ್ರಮ

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಭರವಸೆ
Last Updated 23 ಜೂನ್ 2019, 10:42 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಕಪಿಲೇಶ್ವರ ರಸ್ತೆ ಮೇಲ್ಸೇತುವೆ ಕೆಳಭಾಗದಲ್ಲಿರುವ ಬಡಾವಣೆಗಳಿಗೆ ಭಾನುವಾರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬೇಟಿ ನೀಡಿ, ಸ್ಥಳೀಯರ ಸಮಸ್ಯೆಯನ್ನು ಆಲಿಸಿದರು.

‘ಮೇಲ್ಸೆತುವೆ ನಿರ್ಮಾಣದ ಸಂದರ್ಭದಲ್ಲಿ ರೈಲು ಹಳಿಗಳನ್ನು ದಾಟದಂತೆ ತಡೆಗೋಡೆ ಹಾಕಿರುವುದರಿಂದ ಇಲ್ಲಿನ ತಹಶೀಲ್ದಾರಗಲ್ಲಿ, ಬಾಂದೂರಗಲ್ಲಿ, ತಾನಾಜಿಗಲ್ಲಿಯ ನಿವಾಸಿಗಳಿಗೆ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಬೇರೆ ಮಾರ್ಗದಿಂದ ಸುತ್ತುಹಾಕಿ ಸಂಚಾರ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ, ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು’ ಎಂದು ಸ್ಥಳೀಯ ನಿವಾಸಿಗಳು ಮನವಿ ಮಾಡಿದರು.

‘ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ‘ಈ ಭಾಗದಲ್ಲಿ ಸಂಚಾರಕ್ಕಾಗಿ ಶೀಘ್ರ ಅಂಡರ್‌ಗ್ರೌಂಡ್‌ ಪ್ಯಾಸೇಜ್‌ ನಿರ್ಮಾಣ ಮಾಡಲಾಗುವುದು. ಎರಡು ಬದಿಯಲ್ಲಿ ಲಿಪ್ಟ್‌ಗಳನ್ನು ಅಳವಡಿಸಲಾಗುವುದು’ ಎಂದು ಭರವಸೆ ನೀಡಿದರು.

ನಂತರ ಕಪಿಲೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನೈಋತ್ಯರೈಲ್ವೆ ವಲಯದ ಜನರಲ್ ಮ್ಯಾನೇಜರ್ ಎ.ಕೆ. ಸಿಂಗ್, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಮುಖಂಡ ವಿಶ್ವನಾಥ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT