ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಸಿಯು: ರಾಮಚಂದ್ರಗೌಡ ಅಧಿಕಾರ ಸ್ವೀಕಾರ

Last Updated 4 ಜುಲೈ 2019, 12:32 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಎಂ. ರಾಮಚಂದ್ರಗೌಡ ಗುರುವಾರ ಅಧಿಕಾರ ವಹಿಸಿಕೊಂಡರು.

ಪ್ರಭಾರ ಕುಲಪತಿ ಪ್ರೊ.ಎಸ್.ಎಂ. ಹುರಕಡ್ಲಿ ಅಧಿಕಾರ ಹಸ್ತಾಂತರಿಸಿದರು. ಕುಲಸಚಿವರಾದ ಪ್ರೊ.ಸಿದ್ದು ಪಿ. ಆಲಗೂರ, ಪ್ರೊ.ರಂಗರಾಜ ವನದುರ್ಗ, ಹಣಕಾಸು ಅಧಿಕಾರಿ ಶಂಕರಾನಂದ ಬನಶಂಕರಿ ಹಾಗೂ ಸಿಂಡಿಕೇಟ್ ಸದಸ್ಯರಾದ ನರಸಿಂಹ ರಾಯಚೂರು, ರಾಜು ಚಿಕ್ಕನಗೌಡರ ಉಪಸ್ಥಿತರಿದ್ದರು.

ಕರ್ನಾಟಕ ಸರ್ಕಾರಿ ಕಾಲೇಜು ಶಿಕ್ಷಕ ಸಂಘದ ಅಧ್ಯಕ್ಷ ಪ್ರೊ.ಟಿ.ಎಂ. ಮಂಜುನಾಥ, ವಿಶ್ವವಿದ್ಯಾಲಯಗಳ ಒಕ್ಕೂಟ ಮತ್ತು ಕಾಲೇಜು ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಬಿ.ಜಿ. ಭಾಸ್ಕರ್, ಕರ್ನಾಟಕ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ.ಎಂ. ಜಯಪ್ಪ, ಕ.ವಿ.ಸ್ನಾ.ಶಿ.ಸಂ. ಮತ್ತು ರಾ.ಚ.ಸ್ನಾ.ಶಿ.ಸಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳ ವಾಣಿಜ್ಯ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಹೊನ್ನು ಸಿದ್ಧಾರ್ಥ ಭಾಗವಹಿಸಿದ್ದರು.

ಕುಲಪತಿ ವಿವಿಧ ಅಕಾಡೆಮಿಕ್ ಕಟ್ಟಡಗಳು ಮತ್ತು ಹಾಸ್ಟೆಲ್ ಕಟ್ಟಡಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಎಲ್ಲ ಸ್ಕೂಲ್ ನಿರ್ದೇಶಕರು ಮತ್ತು ಎಲ್ಲಾ ವಿಭಾಗಗಳ ಮುಖ್ಯಸ್ಥರ ಸಭೆ ನಡೆಸಿದರು. ಆರ್‌ಸಿಯು ಶಿಕ್ಷಕರ ಸಂಘದ ಅಧ್ಯಕ್ಷ ಪ್ರೊ.ಡಿ.ಎನ್. ಪಾಟೀಲ, ಪರಿಶಿಷ್ಟ ಜಾತಿ ಹಾಗೂ ಪಂಗಡದ ಶಿಕ್ಷಕರ ಸಂಘ ಹಾಗೂ ಬೋಧಕೇತರ ಸಿಬ್ಬಂದಿ ಸಂಘದ ಪದಾಧಿಕಾರಿಗಳು ಶುಭಾಶಯ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT