ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವದತ್ತಿ ಯಲ್ಲಮ್ಮ ಸೇರಿ 3 ದೇವಸ್ಥಾನ ಮತ್ತೊಂದು ತಿಂಗಳು ಬಂದ್

Last Updated 30 ನವೆಂಬರ್ 2020, 14:11 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಸವದತ್ತಿಯ ಸುಕ್ಷೇತ್ರ ರೇಣುಕಾ ಯಲ್ಲಮ್ಮದೇವಿ, ಜೋಗುಳಬಾವಿ ಸತ್ತೆಮ್ಮದೇವಿ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿ ಮಾಯಕ್ಕದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ಡಿ.31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

‘ಈ ದೇವಸ್ಥಾನಗಳಿಗೆ ನೆರೆಯ ಮಹಾರಾಷ್ಟ್ರ ಮೊದಲಾದ ಕಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇದನ್ನು ತಡೆಯಲು, ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ನಿತ್ಯದ ಧಾರ್ಮಿಕ ವಿಧಿವಿಧಾನಗಳನ್ನು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ನಡೆಸಲು ಷರತ್ತಿಗೆ ಒಳಪಟ್ಟು ವಿನಾಯಿತಿ ನೀಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕೊರೊನಾ ಕಾರಣದಿಂದಾಗಿ, ಈ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ಮಾರ್ಚ್‌ 18ರಿಂದಲೂ ನಿಷೇಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT