ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತಬ್ಧಚಿತ್ರ: ಕೇಂದ್ರದ ಧೋರಣೆ ಖಂಡಿಸಿ ಮಾನವ ಬಂಧುತ್ವ ವೇದಿಕೆ ಪ್ರತಿಭಟನೆ

Last Updated 24 ಜನವರಿ 2022, 12:26 IST
ಅಕ್ಷರ ಗಾತ್ರ

ಬೆಳಗಾವಿ: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪ್ರದರ್ಶನಗೊಳ್ಳಬೇಕಿದ್ದ ಮಹಾತ್ಮರ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿರುವ ಗಣರಾಜ್ಯೋತ್ಸವ ಆಯ್ಕೆ ಸಮಿತಿ ಮತ್ತು ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮಾನವ ಬಂಧುತ್ವ ವೇದಿಕೆ ವಿಭಾಗ ಸಂಚಾಲಕ ತೋಳಿ ಭರಮಣ್ಣ, ‘ಕೇರಳ ರಾಜ್ಯದಿಂದ ಬ್ರಹ್ಮಶ್ರೀ ನಾರಾಯಣಗುರು, ಪಶ್ಚಿಮ ಬಂಗಾಳದಿಂದ ನೇತಾಜಿ ಸುಭಾಷ್‌ ಚಂದ್ರ ಭೋಸ್, ತಮಿಳುನಾಡು ಸರ್ಕಾರದಿಂದ ಸ್ವಾತಂತ್ರ್ಯ ಹೋರಾಟ ಬಿಂಬಿಸುವ ಸ್ತಬ್ಧಚಿತ್ರಗಳನ್ನು ಕಳುಹಿಸಿಕೊಡಲಾಗಿತ್ತು. ಆದರೆ, ಗಣರಾಜ್ಯೋತ್ಸವ ಆಯ್ಕೆ ಸಮಿತಿ ಈ ಮೂರು ರಾಜ್ಯಗಳ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿ, ಮಹಾತ್ಮರಿಗೆ ಅಪಮಾನ ಮಾಡಿದೆ’ ಎಂದು ಆರೋಪಿಸಿದರು.

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಕ್ಕೂಟ ವ್ಯವಸ್ಥೆ ಬಗ್ಗೆ ಗೌರವವಿಲ್ಲ. ಇದರಿಂದ ದೇಶದ ಜನರು ಆ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ’ ಎಂದು ದೂರಿದರು.

‘ಅವರು ದೇಶದ ಜನರ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಕೇಂದ್ರ ಸರ್ಕಾರದ ಈ ದುಷ್ಟ ನೀತಿಯ ವಿರುದ್ಧವಾಗಿ ನಿರಂತವಾಗಿ ಹೋರಾಟ ಮುಂದುವರಿಸುತ್ತೇವೆ’ ಎಂದು ಹೇಳಿದರು.

ಆಕಾಶ ಬೆವಿನಕಟ್ಟಿ, ಯುವರಾಜ ತಳವಾರ , ವಕೀಲ ಈರಣ್ಣ ಪೂಜೇರಿ, ಧರ್ಮರಾಜ ಗೌಡರ, ರೋಹಿಣಿ ಬಾಬಸೇಟ್, ಆಯಿಷಾ ಸನದಿ, ರಾಜಶ್ರೀ ನಾಯಕ, ದಿಲ್ದಾರ್ ಬೋಜಗಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT