ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕೋಡಿ: ತುರ್ತು ಪರಿಸ್ಥಿತಿ ವಿರೋಧಿಸಿ ಪ್ರತಿಭಟನೆ

Published 25 ಜೂನ್ 2024, 14:20 IST
Last Updated 25 ಜೂನ್ 2024, 14:20 IST
ಅಕ್ಷರ ಗಾತ್ರ

ಚಿಕ್ಕೋಡಿ: ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರು ಸಂವಿಧಾನಕ್ಕೆ ವಿರುದ್ಧವಾಗಿ 49 ವರ್ಷಗಳ ಹಿಂದೆ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದನ್ನು ವಿರೋಧಿಸಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದಿಂದ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.

ಪಟ್ಟಣದ ಜಿಲ್ಲಾ ಬಿಜೆಪಿ ಕಚೇರಿಯಿಂದ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮುಂತಾದವರ ಮುಂದಾಳತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಕೈಗೊಳ್ಳಲಾಯಿತು.

‘ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸರ್ಕಾರ ತನ್ನ ಸ್ವಾರ್ಥಕ್ಕಾಗಿ ಅಂದು ಸಂವಿಧಾನ ವಿರೋಧಿ ಕೃತ್ಯ ಮಾಡಿ ಇಂದು ಸಂವಿಧಾನದ ಪಾಠವನ್ನು ಮಾಡುತ್ತಿದೆ. ಕಾಂಗ್ರೆಸ್ ಇಬ್ಬಗೆಯ ನೀತಿಯನ್ನು ಬಿಡಬೇಕು. ಕೂಡಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂತಾದ ಕಾಂಗ್ರೆಸ್ ನಾಯಕರು ಕ್ಷಮೆಯಾಚಿಸಬೇಕು‘ ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.

ಪ್ರತಿಭಟನಾಕಾರರು ಬಸವ ವೃತ್ತದ ಕಡೆಗೆ ಆಗಮಿಸುತ್ತಿದ್ದಂತೆಯೇ ಬ್ಯಾರಿಕೇಡ್ ಹಾಕಿ ತಡೆದ ಪೊಲೀಸರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಎರಡು ಬಸ್‌ಗಳಲ್ಲಿ ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಿದರು.

ಮಾಜಿ ವಿಧಾನ ಪರಿಷತ್ ಸದಸ್ಯ ವಿವೇಕರಾವ ಪಾಟೀಲ, ಮಾಜಿ ಶಾಸಕ ಶ್ರೀಮಂತ ಪಾಟೀಲ, ಬಾಳಾಸಾಹೇಬ ವಡ್ಡರ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಹಿಳಾ ಘಟಕದ ಅಧ್ಯಕ್ಷೆ ಶಾಂಭವಿ ಅಶ್ವತ್ಥಪೂರ, ರಾಜು ಹರಗನ್ನವರ, ಅಪ್ಪಾಸಾಹೇಬ ಚೌಗಲಾ, ಮಹೇಶ ಭಾತೆ, ಬಾಬಾಸಾಹೇಬ ಕೆಂಚನ್ನವರ, ಸಂಜಯ ಪಾಟೀಲ, ಶ್ರೀಕಾಂತ ಕುಲಕರ್ಣಿ, ಅನ್ವೇಕರ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT