ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ನಾರಾಯಣಗೌಡ ಬಂಧನ ಖಂಡಿಸಿ ಪ್ರತಿಭಟನೆ

Published 31 ಡಿಸೆಂಬರ್ 2023, 6:59 IST
Last Updated 31 ಡಿಸೆಂಬರ್ 2023, 6:59 IST
ಅಕ್ಷರ ಗಾತ್ರ

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾನುವಾರ ಪ್ರತಿಭಟನೆ ಆರಂಭಿಸಿದ್ದಾರೆ.

‌ಈ ಮಾರ್ಗದಲ್ಲಿ ಸಾಗುವ ಎಲ್ಲ ಬಸ್‌ಗಳನ್ನು ತಡೆದು ಆಕ್ರೋಶ‌ ವ್ಯಕ್ತಪಡಿಸುತ್ತಿರುವ ಪ್ರತಿಭಟನಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಪ್ರತಿಭಟನೆ ತಡೆಯಲು ಯತ್ನಿಸಿದ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT