ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಲಹೊಂಗಲ: ಮಲ್ಲಮ್ಮನ ಪ್ರತಿಮೆ ಲೋಕಾರ್ಪಣೆ ನಿರ್ಲಕ್ಷ್ಯ, ತೀವ್ರ ಪ್ರತಿಭಟನೆ

Last Updated 28 ಫೆಬ್ರವರಿ 2023, 16:07 IST
ಅಕ್ಷರ ಗಾತ್ರ

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ವೃತ್ತದಲ್ಲಿ ಪ್ರತಿಷ್ಠಾಪಿಸಿದ ಅಶ್ವಾರೂಢ ಕಂಚಿನ ಪ್ರತಿಮೆ ಅನಾವರಣ ಸಂಬಂಧವಾಗಿ ಮಂಗಳವಾರ ರಾತ್ರಿ ಗ್ರಾಮದಲ್ಲಿ ತೀವ್ರ ವಾಗ್ವಾದ ನಡೆಯಿತು.

ಬೆಳವಡಿ ಮಲ್ಲಮ್ಮನ ಉತ್ಸವ ಮೆರವಣಿಗೆ ಬೆಳಿಗ್ಗೆಯೇ ನಡೆಯಿತು. ಇದಕ್ಕೂ ಮುನ್ನ ಪ್ರತಿಮೆ ಅನಾವರಣ ಕಾರ್ಯಕ್ರಮ ಇತ್ತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ ಯಾವೊಬ್ಬ ಜನಪ್ರತಿನಿಧಿ, ಅಧಿಕಾರಿಯೂ ಬರಲಿಲ್ಲ. ಇದರಿಂದ ಅನಾವರಣ ಕಾರ್ಯಕ್ರಮವನ್ನು ಮುಂದಕ್ಕೆ ಹಾಕುತ್ತ ಬರಲಾಯಿತು.

ರಾತ್ರಿ 8ರ ನಂತರ ಸಂಸದೆ ಮಂಗಲಾ ಅಂಗಡಿ, ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾಧಿಕಾರಿ ನಿತೇಶ್‌ ‍ಪಾಟೀಲ ಸ್ಥಳಕ್ಕೆ ಬಂದರು. ಬೆಳಿಗ್ಗೆಯಿಂದಲೂ ನಿರ್ಲಕ್ಷ್ಯ ಮಾಡಿದ ಕಾರಣಕ್ಕೆ ಪ್ರತಿಮೆ ಅನಾವರಣ ಮಾಡಲು ಬಿಡುವುದಿಲ್ಲ ಎಂದು ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದರು.

ಇದರ ಮಧ್ಯೆಯೇ ಗ್ರಾಮಸ್ಥರ ಇನ್ನೊಂದು ಗುಂಪು ಬೆಳವಡಿ ಸಂಸ್ಥಾನದ ರಾಜಗುರು ಶಿವಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರಿಂದ ಪ್ರತಿಮೆ ಅನಾವರಣಕ್ಕೆ ಮುಂದಾಯಿತು. ಆಗ ಅಡ್ಡನಿಂತ ಜೆಡಿಎಸ್‌ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದರು. ಪರಸ್ಪರ ನೂಕಾಟ, ತಳ್ಳಾಟ, ಚೀರಾಟ ಆರಂಭವಾಯಿತು. ಇದೆಲ್ಲವನ್ನೂ ಜನಪ್ರತಿನಿಧಿಗಳು ಮೂಕಪ್ರೇಕ್ಷಕರಂತೆ ನಿಂತು ನೋಡಬೇಕಾಯಿತು.

ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದಾಗ ಎಸ್ಪಿ ಡಾ.ಸಂಜೀವ ಪಾಟೀಲ ನೇತೃತ್ವದಲ್ಲಿ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದರು. ಈ ವೇಳೆ ಕ್ರೇನ್‌ ಸಹಾಯದಿಂದ ಮಲ್ಲಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಲೋಕಾರ್ಪಣೆ ಮಾಡಲಾಯಿತು.

ರಾತ್ರಿ 9.30ರವರೆಗೂ ಮುಖ್ಯ ಕಾರ್ಯಕ್ರಮದ ಉದ್ಘಾಟನೆಯೇ ನಡೆದಿರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT