ಬೆಳಗಾವಿ: ಪ್ರಸಕ್ತ ಸಾಲಿನಲ್ಲಿ ರೈತರಿಗೆ ಕಳಪೆ ದರ್ಜೆ ಸೋಯಾಬೀನ್ ಬಿತ್ತನೆ ಬೀಜಗಳನ್ನು ಸರಬರಾಜು ಮಾಡಿದ ಕಂಪನಿಯವರು ಮತ್ತು ಪೂರೈಕೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ(ಸಂಯುಕ್ತ) ರೈತ ಸಂಘಟನೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕಳಪೆ ಬಿತ್ತನೆ ಬೀಜ ವಿತರಿಸಿದ್ದರಿಂದ ಸೋಯಾಬೀನ್ ಬೆಳೆ ಹೂವು, ಕಾಯಿ ಬಿಟ್ಟಿಲ್ಲ. ಇದರಿಂದ ರೈತರಿಗೆ ಆರ್ಥಿಕ ನಷ್ಟವಾಗಿದೆ. ಇದಕ್ಕೆ ಕಾರಣರಾದವರ ವಿರುದ್ಧ ಶಿಸ್ತ ಕ್ರಮ ಜರುಗಿಸಬೇಕು. ಸತತ ಮಳೆ ಮತ್ತು ಪ್ರವಾಹದಿಂದ ತತ್ತರಿಸಿದ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಒತ್ತಾಯಿಸಿದರು.

ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಸಿದಗೌಡ ಮೋದಗಿ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.