ಮಂಗಳವಾರ, ಮೇ 18, 2021
28 °C

ಎಂಇಎಸ್‌ನಿಂದ ಹುತಾತ್ಮ ದಿನಾಚರಣೆ: ಅನುಮತಿ ನೀಡದಂತೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮೀತಿಯವರು (ಎಂಇಎಸ್‌) ಜನವರಿ 17ರಂದು ಆಯೋಜಿಸಿರುವ ಹುತಾತ್ಮ ದಿನಾಚರಣೆ, ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಅನುಮತಿ ನೀಡದಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ರಾಣಿ ಚನ್ನಮ್ಮ ವೃತ್ತದಿಂದ ಪ್ರತ್ಯೇಕವಾಗಿ ಮೆರವಣಿಗೆ ನಡೆಸಿದರು.

‘ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗಡಿ ವಿವಾದ ಕೆದಕುತ್ತಿದೆ. ಇದರಿಂದ ಗಡಿಯಲ್ಲಿ ಶಾಂತಿಯನ್ನು ಕದಡುವ ಪ್ರಯತ್ನಗಳು ನಡೆಯುತ್ತಿವೆ. ಇದಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ಎಂಇಎಸ್ ಮುಖಂಡರು ಹುತಾತ್ಮ ದಿನಾಚರಣೆ ಹೆಸರಿನಲ್ಲಿ ನಾಡ ವಿರೋಧಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಅದಕ್ಕೆ ಅನುಮತಿ ಕೊಡಬಾರದು’ ಎಂದು ಒತ್ತಾಯಿಸಿದರು.

ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವ ತಳವಾರ, ‘ಎಂಇಎಸ್‌ನವರು ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಮಹಾರಾಷ್ಟ್ರದ ಸಾಹಿತಿಗಳನ್ನು ಕರೆತಂದು ಗಡಿ ಭಾಗದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಸಾಹಿತ್ಯ ಸಮ್ಮೇಳನಕ್ಕೆ ನಮ್ಮ ವಿರೋಧವಿಲ್ಲ. ಕರ್ನಾಟಕದಲ್ಲೇ ಅನೇಕ ಮರಾಠಿ ಸಾಹಿತಿಗಳಿದ್ದಾರೆ. ಅವರನ್ನು ಕರೆತಂದು ಸಾಹಿತ್ಯ ಸಮ್ಮೇಳನ ನಡೆಸಬೇಕು. ಮಹಾರಾಷ್ಟ್ರ ಸಾಹಿತಿಗಳು ಮತ್ತು ರಾಜಕಾರಣಿಗಳಿಗೆ ಅವಕಾಶ ನೀಡಬಾರದು’ ಎಂದು ಒತ್ತಾಯಿಸಿದರು.

ಕರವೇ ಸ್ವಾಭಿಮಾನಿ ಬಣದ ರಾಜ್ಯ ಸಂಘಟನಾ ಕಾರ್ಯದರ್ಶಿ ಯಶೋಧಾ ಬಿರಡೆ, ಮುಖಂಡರಾದ ದೀಪಕ ಗುಡಗನಟ್ಟಿ, ಗಣೇಶ ರೊಕಡೆ, ಹೊಳೆಪ್ಪ ಸುಲದಾಳ, ದೇವೇಂದ್ರ ತಳವಾರ, ಲಗಮಣ್ಣ ಎಚ್.ಎನ್., ಸಾವಂತ ಹೊಸಮನಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.