ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಣಂತಿ ಸಾವು: ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ

Published 4 ಆಗಸ್ಟ್ 2023, 16:33 IST
Last Updated 4 ಆಗಸ್ಟ್ 2023, 16:33 IST
ಅಕ್ಷರ ಗಾತ್ರ

ಸಂಕೇಶ್ವರ: ‘ವೈದ್ಯರ ನಿರ್ಲಕ್ಷ್ಯದಿಂದಾಗಿ ಬಾಣಂತಿ ಮೃತಪಟ್ಟಿದ್ದಾರೆ. ವೈದ್ಯರ ಮೇಲೆ ಕ್ರಮ ಜರುಗಿಸಬೇಕು’ ಎಂದು ಆರೋಪಿಸಿ ಕುಟುಂಬದವರು, ಶುಕ್ರವಾರ ರಾತ್ರಿ ಸ್ಥಳೀಯ ಪೊಲೀಸ್‌ ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದರು.

ಕೊಣಕೇರಿ ಗ್ರಾಮದ ಕಿರಣ ಮೋಹನ ಟಿ.ಕೆ. (23) ಮೃತ ಬಾಣಂತಿ. 10 ದಿನಗಳ ಹಿಂದೆ ಅವರು ಗಂಡುಮಗುವಿಗೆ ಜನ್ಮ ನೀಡಿದ್ದರು.

‘ಹೆರಿಗೆ ಬಳಿಕ ಕಿರಣ ಅವರಿಗೆ ಹುಕ್ಕೇರಿ ತಾಲ್ಲೂಕಿನ ನಿಡಸೋಸಿ ಸರ್ಕಾರಿ ಆಸ್ಪತ್ರೆಯಲ್ಲಿ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಬಳಿಕ ನಾಲ್ಕು ದಿನಗಳ ಹಿಂದಷ್ಟೇ ಸರ್ಕಾರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಬಳಿಕ ಹೊಟ್ಟೆ ನೋವಿನ ಕಾರಣಕ್ಕೆ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗಿ ಬಾಣಂತಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಕುಟುಂಬದವರು ದೂರಿದ್ದಾರೆ.

ಬಾಣಂತಿ ಶವವನ್ನು ಆಂಬುಲೆನ್ಸ್‌ನಲ್ಲಿಯೇ ಸಂಕೇಶ್ವರ ಪೊಲೀಸ್‌ ಠಾಣೆಯ ಎದುರು ತಂದು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT