ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ್ರಸ್ತರಿಗೆ ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

Last Updated 18 ಅಕ್ಟೋಬರ್ 2019, 13:10 IST
ಅಕ್ಷರ ಗಾತ್ರ

ಅಥಣಿ: ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ದರೂರ ಸಮೀಪದ ಕೃಷ್ಣಾ ನದಿ ಸೇತುವೆಯಿಂದ ಮಿನಿ ವಿಧಾನಸೌಧವರೆಗೆ ನೂರಾರು ಮಂದಿ ಪಾದಯಾತ್ರೆ ಮೂಲಕ ಶುಕ್ರವಾರ ಪ್ರತಿಭಟನೆ ನಡೆಸಿದರು.

12 ಕಿ.ಮೀ.ವರೆಗೆ ಪಾದಯಾತ್ರೆ ನಡೆಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಥಣಿ ಪ್ರವೇಶಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಬೆಂಬಲ ಸೂಚಿಸಿದರು. ನಂತರ ತಾಲ್ಲೂಕು ಪಂಚಾಯ್ತಿ ಕಚೇರಿಗೆ ಮನವಿ ಸಲ್ಲಿಸಿದರು.

‘ಸಂತ್ರಸ್ತರ ಸಂಕಷ್ಟ ನಿವಾರಣೆ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ನೆರೆ ಬಂದು ಎರಡೂವರೆ ತಿಂಗಳುಗಳು ಕಳೆದರೂ ಪರಿಹಾರ ನೀಡಿಲ್ಲ. ನಿರಾಶ್ರಿತರು ಹೊಸ ಬದುಕು ಕಟ್ಟಿಕೊಳ್ಳಲು ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.

ಮುಖಂಡರಾದ ಸಂಜೀವ ಕಾಂಬಳೆ, ವಿಲಾಸ ಕಾಂಬಳೆ, ಸಚಿನ ಕಾಂಬಳೆ, ದಿಲೀಪ ಕಾಂಬಳೆ, ಮಾರುತಿ ಕಾಂಬಳೆ, ಕಾಂಗ್ರೆಸ್ ಮುಖಂಡರಾದ ಬಸವರಾಜ ಠಕ್ಕಣ್ಣವರ, ಸುನೀಲ ಸಂಕ, ಗಜಾನನ ಮಂಗಸೂಳಿ, ಅನಿಲ ಸುಣಧೋಳಿ, ಅಥಣಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ, ಕಪಿಲ್ ಘಟಕಾಂಬಳೆ, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಬಸನಗೌಡ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT