ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಬೆಳಗಾವಿ: ವೇತನಕ್ಕೆ ಆಗ್ರಹಿಸಿ ನೌಕರರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ನಗರದಲ್ಲಿ ನೀರು ಸರಬರಾಜು ಹೊಣೆಯನ್ನು ಖಾಸಗಿ ಕಂಪನಿಗೆ ಹಸ್ತಾಂತರಿಸಿದ ನಂತರ ನಮಗೆ 15 ದಿನಗಳಿಂದ ವೇತನ ಬಂದಿಲ್ಲ. ಇದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ’ ಎಂದು ನೀರು ಪೂರೈಕೆ ನೌಕರರು ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್‌ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ವ್ಯಾಪ್ತಿಯಲ್ಲಿ ಕೆಲಸ ಮಾಡುವಾಗ ವೇತನ ಸಕಾಲಕ್ಕೆ ಬರುತ್ತಿತ್ತು. ಈಗ ತೊಂದರೆಯಾಗಿದೆ. ಕಂಪನಿಯಿಂದ ನೇಮಕ ಮಾಡಿಕೊಂಡವರಿಗೆ ಸರಿಯಾಗಿ ವೇತನ ಕೊಡಲಾಗುತ್ತಿದೆ. ಆದರೆ, ನಮ್ಮನ್ನು ಕಡೆಗಣಿಸಲಾಗುತ್ತಿದೆ’ ಎಂದು ದೂರಿದರು.

‘ವೇತನ ಕೇಳಿದರೆ, ಆ ಕಂಪನಿಯವರು ಹಾರಿಕೆ ಉತ್ತರ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ನಮ್ಮ ಕೆಲಸ ಕಾಯಂಗೊಳಿಸಬೇಕು. ಸೇವಾ ಭದ್ರತೆ ಒದಗಿಸಬೇಕು. ಹಿಂದಿನಂತೆಯೇ ಸಕಾಲಕ್ಕೆ ವೇತನ ದೊರೆಯುವಂತಾಗಬೇಕು. ಇಲ್ಲವಾದಲ್ಲಿ ನಮ್ಮನ್ನು ನಗರಪಾಲಿಕೆ ಅಥವಾ ಜಲಮಂಡಳಿ ಸಿಬ್ಬಂದಿ ಎಂದೇ ಪರಿಗಣಿಸಿ ತಿಂಗಳ 5ನೇ ತಾರೀಖಿನೊಳಗೆ ವೇತನ ನೀಡಬೇಕು’ ಎಂದು ಒತ್ತಾಯಿಸಿದರು.

‘ವೇತನ ಸಿಗುವವರೆಗೂ ನೀರು ಪೂರೈಕೆ ಕೆಲಸದಿಂದ ದೂರ ಉಳಿಯಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ನೌಕರರ ಆರೋಪದ ಬಗ್ಗೆ ಪ್ರತಿಕ್ರಿಯೆಗೆ ಕಂಪನಿಯ ಪ್ರತಿನಿಧಿಗಳು ಲಭ್ಯವಾಗಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು