ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಮಕನಮರಡಿ: 20 ದಿನವಾದರೂ ಪೂರೈಕೆಯಾಗದ ನೀರು

ಗ್ರಾ.ಪಂ ಕಚೇರಿಗೆ ಬೀಗ ಜಡಿದು ಮಹಿಳೆಯರ ಪ್ರತಿಭಟನೆ
Published 6 ಆಗಸ್ಟ್ 2024, 12:48 IST
Last Updated 6 ಆಗಸ್ಟ್ 2024, 12:48 IST
ಅಕ್ಷರ ಗಾತ್ರ

ಯಮಕನಮರಡಿ: ಮತಕ್ಷೇತ್ರದ ವ್ಯಾಪ್ತಿಗೆ ಬರುವ, ಸಚಿವ ಸತೀಶ ಜಾರಕಿಹೊಳಿ ಅವರ ಕ್ಷೇತ್ರ ಹೆಬ್ಬಾಳದಲ್ಲಿ 20 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ, ಗ್ರಾಮ ಪಂಚಾಯಿತಿ ಎದುರು ಪ್ರತಿಭಟಿಸಿರು.

‘40 ದಿನಗಳಿಂದ ವಿಪರೀತ ಮಳೆಯಾದರೂ ಗ್ರಾಮಕ್ಕೆ ಕುಡಿಯುವ ನೀರಿಲ್ಲ. ಹಿರಣ್ಯಕೇಶಿ ನದಿಯಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಮತ್ತು ಹಿಡಕಲ್ ಜಲಾಶಯದಿಂದ 14ಕಿ.ಮೀ ದೂರದಲ್ಲಿರುವ ಗ್ರಾಮಕ್ಕೆ ನೀರಿನ ಸಮಸ್ಯೆ ಇದೆ.  15 ಸಾವಿರ ಜನಸಂಖ್ಯೆ ಹೊಂದಿದ ಗ್ರಾಮಕ್ಕೆ 20 ದಿನಕ್ಕೊಮ್ಮೆ ನೀರು ಬಿಟ್ಟರೇ ಹೇಗೆ?’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ವಿರುದ್ಧ ಘೋಷಣೆ ಕೂಗಿದ ಮಹಿಳೆಯರು, ಗ್ರಾಮ ಪಂಚಾಯಿತಿ ಕಚೇರಿಯ ಬೀಗ ಜಡಿದು ಪ್ರತಿಭಟಿಸಿದರು. ಹುಕ್ಕೇರಿ ಎಇಇ, ಪಿಡಿಒ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಯಾರೂ ಸ್ಥಳಕ್ಕೆ ಭೇಟಿ ನೀಡಲಿಲ್ಲ.

ಮಹಾದೇವಿ ಮಠಪತಿ, ಸುಶವ್ವಾ ಮಾಳಗಿ, ಪೂಜಾ ಮಠಪತಿ, ಜಯಶ್ರೀ ಮಠಪತಿ ಸೇರಿದಂತೆ ಅನೇಕ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಲೋಕಸಭಾ ಚುನಾವಣೆಯಲ್ಲಿ ಈ ಗ್ರಾಮದಿಂದ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಕಡಿಮೆ ಆಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ

-ರಾವುಸಾಹೇಬ ಪಾಟೀಲ ಜೆಡಿಎಸ್ ಕಾರ್ಯಕರ್ತ ಹೆಬ್ಬಾಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT