ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇರ ವೇತನ ಜಾರಿಗೊಳಿಸಲು ಆಗ್ರಹ: ಹೊರಗುತ್ತಿಗೆ ನೌಕರರ ಸಂಘದ ಪ್ರತಿಭಟನೆ

Last Updated 22 ಡಿಸೆಂಬರ್ 2021, 14:11 IST
ಅಕ್ಷರ ಗಾತ್ರ

ಬೆಳಗಾವಿ: ‘ವಾಹನ ಚಾಲಕರು, ಡೇಟಾ ಆಪರೇಟರ್‌ಗಳು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಸಂಘದವರು ಸುವರ್ಣ ವಿಧಾನಸೌಧ ಸಮೀಪ ಬುಧವಾರ ಪ್ರತಿಭಟನೆ ನಡೆಸಿದರು.

‘ತಲಾ 500 ಜನಸಂಖ್ಯೆಗೆ ಒಬ್ಬರಂತೆ ಪೌರಕಾರ್ಮಿಕರನ್ನು ನಿಯೋಜಿಸಬೇಕು. ಬಾಕಿ ಉಳಿದಿರುವ ಪೌರಕಾರ್ಮಿಕರ ಹುದ್ದೆಗಳ 2ನೇ ಹಂತದ ನೇರ ನೇಮಕಾತಿಗೆ ಚಾಲನೆ ಕೊಡಬೇಕು’ ಎಂದು ಒತ್ತಾಯಿಸಿದರು.

‘ಚಾಲಕರಿಗೂ ಬೆಳಗಿನ ಉಪಹಾರ, ವಿಮೆ, ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ಉಚಿತವಾಗಿ ಮನೆಗಳನ್ನು ಒದಗಿಸಬೇಕು. ಕಾಲಕಾಲಕ್ಕೆ ಪೌರಾಡಳಿತ ಇಲಾಖೆಯ ವೃಂದ ಹಾಗೂ ನೇಮಕಾತಿ ನಿಯಮಾವಳಿ ಪರಿಷ್ಕರಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT