ಪ್ರಾಥಮಿಕ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ

7

ಪ್ರಾಥಮಿಕ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ

Published:
Updated:
Deccan Herald

ಬೆಳಗಾವಿ: ಹೈದರಾಬಾದ್ ಕರ್ನಾಟಕ ವಿಭಾಗದ ಪದವೀಧರ ಹಿರಿಯ ಪ್ರಾಥಮಿಕ ಶಿಕ್ಷಕರನ್ನು 371 (ಜೆ) ಅಡಿಯಲ್ಲಿ ಜೇಷ್ಠತೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ 2ನೇ ಪಟ್ಟಿ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕಲಬುರಗಿಯ ಹೈದರಾಬಾದ್ ಕರ್ನಾಟಕ ಪದವೀಧರ ನಿರುದ್ಯೋಗಿ ಶಿಕ್ಷಕರ ಸಂಘದವರು ಗುರುವಾರ ತಾಲ್ಲೂಕಿನ ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು.

ಬುಧವಾರ ಧರಣಿ ನಡೆಸಿದ್ದ ಅವರು, ಸರ್ಕಾರದಿಂದ ಸ್ಪಂದನೆ ಸಿಗದೇ ಇರುವುದರಿಂದ ಪ್ರತಿಭಟನೆ ಮುಂದುವರಿಸಿರುವುದಾಗಿ ತಿಳಿಸಿದರು.

371 (ಜೆ) ಅನ್ವಯ ಮಾಡಿಕೊಳ್ಳಲಾದ ನೇಮಕಾತಿಯಲ್ಲಿ ಉಳಿದಿರುವ ಇಂಗ್ಲಿಷ್, ಗಣಿತ ಹಾಗೂ ವಿಜ್ಞಾನ ಅಭ್ಯರ್ಥಿಗಳನ್ನು ಜೇಷ್ಠತೆ ಆಧಾರದ ಮೇಲೆ ನೇಮಕಕ್ಕೆ ಅಡ್ವೊಕೇಟ್ ಜನರಲ್ ಅವರು ಡಿಪಿಇಆರ್‌ಗೆ ಅನುಮತಿ ನೀಡಿದ್ದರೂ ಇಲಾಖೆ ಮೀನಮೇಷ ಎಣಿಸುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಬೇಡಿಕೆ ಈಡೇರಿಸದಿದ್ದಲ್ಲಿ, ಹೈದರಾಬಾದ್ ಕರ್ನಾಟಕವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಅಗ್ರಹಿಸಿದರು.

‌ಸಿ.ಜಿ. ಹೊಸಮನಿ ನೇತೃತ್ವ ವಹಿಸಿ‌ದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !