ಪ್ರತಿಭಟನಾನಿರತ ಇಬ್ಬರು ಮಹಿಳೆಯರು ಅಸ್ವಸ್ಥ

7

ಪ್ರತಿಭಟನಾನಿರತ ಇಬ್ಬರು ಮಹಿಳೆಯರು ಅಸ್ವಸ್ಥ

Published:
Updated:

ಬೆಳಗಾವಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ 3,312 ‘ಡಿ’ ಗ್ರೂಪ್ ಹೊರಗುತ್ತಿಗೆ ನೌಕರರನ್ನು ಕೆಲಸದದಿಂದ ತೆಗೆದುಹಾಕದೇ ಸೇವೆಯಲ್ಲಿ ಮುಂದುವರಿಸುವಂತೆ ಆಗ್ರಹಿಸಿ ಎಐಯುಟಿಯುಸಿ ನೇತೃತ್ವದಲ್ಲಿ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದವರು ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಶುಕ್ರವಾರವೂ ಪ್ರತಿಭಟನೆ ನಡೆಸಿದರು.

ದಾವಣಗೆರೆ ಜಿಲ್ಲೆ ಚನ್ನಗಿರಿಯ ಹೇಮಾಬಾಯಿ ಹಾಗೂ ಜಗಳೂರಿನ ಹೊನ್ನಮ್ಮ ಅಸ್ವಸ್ಥಗೊಂಡರು. ಅವರನ್ನು ಆಂಬುಲೆನ್ಸ್‌ನಲ್ಲಿ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.

‘ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರದ ಪ್ರತಿನಿಧಿಗಳು ತಮ್ಮನ್ನು ಭೇಟಿಯಾಗಿ ಚರ್ಚಿಸಿಲ್ಲ. ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಂಡಿಲ್ಲ. ಬಡವರೆಂದರೆ ಸರ್ಕಾರಕ್ಕೆ ಅಸಡ್ಡೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !