ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: ಕೋರ್ಟ್ ತೀರ್ಪಿನ ಬಳಿಕ ಸರ್ಕಾರದ ನಿಲುವು ಪ್ರಕಟ– ಆರಗ

Last Updated 23 ಡಿಸೆಂಬರ್ 2022, 13:27 IST
ಅಕ್ಷರ ಗಾತ್ರ

ಬೆಳಗಾವಿ: ‘545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಇನ್ನೂ ಮುಂದುವರಿದಿದೆ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾದ ನಂತರ ಸರ್ಕಾರವು ತನ್ನ ನಿಲುವು ಪ್ರಕಟಿಸಲಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

‘ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಮರುಪರೀಕ್ಷೆ ಮಾಡಬಾರದು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರಿಗೆ ನೇಮಕಾತಿ ಆದೇಶ ನೀಡಬೇಕು’ ಎಂದು ಒತ್ತಾಯಿಸಿ, ಇಲ್ಲಿನ ಸುವರ್ಣ ಸೌಧದ ಎದುರು ಹಲವು ಅಭ್ಯರ್ಥಿಗಳು ಶುಕ್ರವಾರ ನಡೆಸಿದ ಪ್ರತಿಭಟನಾ ಸ್ಥಳದಲ್ಲಿ ಅವರು ಮಾತನಾಡಿದರು.

‘ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರ ನೋವು ನನಗೂ ಅರ್ಥವಾಗುತ್ತದೆ. ಆದರೆ, ಸಿಐಡಿ ತಂಡ ಗುರುವಾರ ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಹೀಗಾಗಿ, ತನಿಖೆ ಪೂರ್ಣವಾಗುವವರೆಗೂ ನಾವು ಕಾಯಬೇಕಾಗುತ್ತದೆ’ ಎಂದರು.

ನಮ್ಮ ಭವಿಷ್ಯದ ಕತೆ ಏನು?

‘ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ‍ಅಕ್ರಮ ಎಸಗಿದವರನ್ನು ಡಿಬಾರ್‌ ಮಾಡಲಾಗುವುದು ಎಂದು ನೇಮಕಾತಿ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಆದರೆ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದ ನಮ್ಮ ಭವಿಷ್ಯದ ಕತೆ ಏನು? ಯಾರೋ ಮಾಡಿದ ತಪ್ಪಿಗೆ ನಾವೂ ಬೆಲೆ ತೆರಬೇಕೇ? ಪ್ರಾಮಾಣಿಕರಿಗೆ ನೇಮಕಾತಿ ಆದೇಶ ಕೊಡದಿರಲು ಕಾರಣವೇನು’ ಎಂದು ಅಭ್ಯರ್ಥಿಗಳು ಪ್ರಶ್ನಿಸಿದರು.

ಅಭ್ಯರ್ಥಿಗಳಾದ ವಿನಾಯಕ ಬಿ.ಡಿ, ಅಮರನಾಥ, ಸಂತೋಷ ಕಾಂಬಳೆ, ಪಿ.ಕೆ.ಸಾಗರ್‌, ಮಂಜುಳಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT