ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಲಿಬೆಲೆ ಗೊಂದಲ ಸೃಷ್ಟಿಸುವ ವ್ಯಕ್ತಿ: ಸತೀಶ ಜಾರಕಿಹೊಳಿ

Published 6 ಜೂನ್ 2023, 12:35 IST
Last Updated 6 ಜೂನ್ 2023, 12:35 IST
ಅಕ್ಷರ ಗಾತ್ರ

ಗೋಕಾಕ: ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ಟೀಕಿಸಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಚಕ್ರವರ್ತಿ ಸೂಲಿಬೆಲೆ ಒಬ್ಬ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ವ್ಯಕ್ತಿ, ಪ್ರಧಾನಿ ಮೋದಿ ಹೇಳದಿರುವ ಭರವಸೆಗಳನ್ನು ಈತನೇ ಹೇಳುತ್ತಾನೆ. ಸೂಲಿಬೆಲೆ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ’ ಎಂದರು.

ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ, ಸಚಿವ ಎಂ.ಬಿ.ಪಾಟೀಲ್ ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಮುಂದುವರಿಸಿದರೆ ಸೂಲಿಬೆಲೆಗೆ ಜೈಲು ಕಂಬಿ ಎಣಿಸುವಂತೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ ಅಷ್ಟೇ ಎಂದರು.

‘ಗೋವು ಹತ್ಯೆ ನಿಷೇಧದ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು, ಆತುರದ ನಿರ್ಧಾರದಿಂದ ಸಮಸ್ಯೆಗಳು ಉದ್ಬವಿಸಬಾರದು ಎಂದ ಅವರು, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಸಲಾಗುವುದು. ಅಕ್ರಮದಲ್ಲಿ ಸ್ಥಳೀಯ ಶಾಸಕರ ಹಸ್ತಕ್ಷೇಪ ಇದೆ ಎಂಬ ಗುಮಾನಿ ಇದೆ, ಸೂಕ್ತ ದಾಖಲೆ ನೀಡಿದರೆ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಾಗುವುದು. ಸರಿಯಾಗಿ ಕಾರ್ಯ ನಿರ್ವಹಿಸದ ಅಧಿಕಾರಗಳಿಗೆ ನಮ್ಮ ಜಿಲ್ಲೆಯಿಂದ ಗೇಟ್ ಪಾಸ್ ನೀಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT