ನೂತನ ಜಿಲ್ಲಾಧಿಕಾರಿ ಾರ್. ವೆಂಕಟೇಶ್ ಕುಮಾರ್ ಅಧಿಕಾರ ಸ್ವೀಕಾರ

ಬೆಳಗಾವಿ: ನೂತನ ಜಿಲ್ಲಾಧಿಕಾರಿಯಾಗಿ ಆರ್. ವೆಂಕಟೇಶ್‌ಕುಮಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಬಳಿಕ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯ ಸಿದ್ಧತೆ ಹಾಗೂ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಕುರಿತು ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು.
ಈವರೆಗೆ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ. ಹಿರೇಮಠ ಅವರನ್ನು ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ (ಇದೇ ಜಿಲ್ಲೆಯವರಾದ್ದರಿಂದ) ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.