ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ಗೆ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾದ ರಾಹುಲ ಸತೀಶ ಜಾರಕಿಹೊಳಿ ಅವರನ್ನು ಅಪೆಕ್ಸ್ ಬ್ಯಾಂಕ್ಗೆ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ಎರಡು ದಶಕಗಳಿಂದ ಶಾಸಕ ಲಕ್ಷ್ಮಣ ಸವದಿ ಅವರೇ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿದ್ದರು. ಹಿರಿಯ ನಾಯಕರೆಲ್ಲರನ್ನು ಹಿಂದೆ ಸರಿಸಿ, ಯುವಕ ರಾಹುಲ್ ಅವರನ್ನು ಅಪೆಕ್ಸ್ ಬ್ಯಾಂಕ್ಗೆ ಕಳುಹಿಸಲಾಗಿದೆ.

‘ಲಕ್ಷ್ಮಣ ಸವದಿ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗದಿದ್ದಲ್ಲಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಮಾಡಲಾಗುತ್ತದೆ’ ಎಂಬ ಚರ್ಚೆ ಜಿಲ್ಲೆಯಲ್ಲಿ ಜೋರಾಗಿ ನಡೆದಿತ್ತು. ರಾಹುಲ ಆಯ್ಕೆ ಸವದಿ ಅವರಿಗೆ ತೀವ್ರ ಹಿನ್ನಡೆ ತಂದಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಈ ಗೋಪ್ಯ ನಡೆ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆ ಹುಟ್ಟುಹಾಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.