ರಾಯಬಾಗ: ‘ತಾಲ್ಲೂಕಿನಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆ ಹೆಚ್ಚುತ್ತಿದ್ದು, ಸಾರ್ವಜನಿಕರು ಆರೋಗ್ಯದ ದೃಷ್ಟಿಯಿಂದ ಅಗತ್ಯವಿಲ್ಲದಿದ್ದರೆ ಮಧ್ಯಾಹ್ನ ವೇಳೆ ಹೊರಗಡೆ ಸಂಚಾರ ಮಾಡುವುದನ್ನು ತಪ್ಪಿಸಬೇಕು’ ಎಂದು ತಹಶೀಲ್ದಾರ್ ಮಹಾದೇವ ಸನಮೂರಿ ತಿಳಿಸಿದ್ದಾರೆ.

‘ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಿಸಿಲಿನ ತಾಪಮಾನ ಅತ್ಯಧಿಕವಾಗಿರುವುದರಿಂದ ಹಿರಿಯ ನಾಗರಿಕರು, ಮಕ್ಕಳು ಹಾಗೂ ಗರ್ಭಿಣಿಯರು ವಿಶೇಷ ಜಾಗೃತೆ ವಹಿಸಬೇಕು. ಬಿಸಿಲಿನ ತೀವ್ರತೆಯಿಂದ ದೇಹದ ನೀರಿನ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ ಹೆಚ್ಚು ನೀರು, ಹಣ್ಣಿನ ರಸ ಹಾಗೂ ತಂಪು ಪಾನೀಯಗಳನ್ನು ಸೇವಿಸುವುದು ಅಗತ್ಯ. ಹೊರಗಡೆ ತೆರಳುವ ಸಂದರ್ಭಗಳಲ್ಲಿ ಛತ್ರಿ, ಟೋಪಿ ಅಥವಾ ರುಮಾಲು ಬಳಕೆ ಮಾಡಿಕೊಳ್ಳಬೇಕು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-21-639461295

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.