ರಾಯಬಾಗ: ತಾಲ್ಲೂಕಿನ ನಿಪನಾಳ ಗ್ರಾಮದಲ್ಲಿ ಪರಿಶಿಷ್ಟ ಪಂಗಡ ಕಾಲೊನಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಹಾಗೂ ಶಾಸಕ ದುರ್ಯೋಧನ ಐಹೊಳೆ ಸೇರಿ ಸೋಮವಾರ ಭೂಮಿಪೂಜೆ ನೆರವೇರಿದರು.

ಸಂಸದೆ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಸರ್ಕಾರ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದು, ಅದನ್ನು ಸಮರ್ಪಕವಾಗಿ ಬಳಸಿ ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸುವುದು ಅಗತ್ಯ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಶಾಸಕ ದುರ್ಯೋಧನ ಐಹೊಳೆ ಮಾತನಾಡಿ, ಮೂಲ ಸೌಕರ್ಯಗಳ ಅಭಿವೃದ್ಧಿಗೆ ನಾನು ಹಾಗೂ ಪ್ರಿಯಾಂಕಾ ಜಾರಕಿಹೊಳಿ ಬದ್ಧರಾಗಿದ್ದು, ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಇಂತಹ ಕಾಮಗಾರಿಗಳು ಸಹಾಯಕವಾಗಲಿವೆ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ, ನಿರ್ಮಲಾ ಪಾಟೀಲ,ಸಿದ್ರಾಮ ಪೂಜೇರಿ, ಶಿವನಗೌಡ ಪಾಟೀಲ, ಸಚಿನ್ ನಾಯಿಕವಾಡಿ, ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೇಮಲಾಪುರೆ, ಮಹಾದೇವ ಕದಂ, ಸಿದ್ದು ಖಿಂಡಿ, ಲಕ್ಷ್ಮಣ್ ಮಂಗಿ, ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-21-599235332

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.