ಬೆಳಗಾವಿ: ನೆರೆಯ ಮಹಾರಾಷ್ಟ್ರದಿಂದ ಬಿಡಲಾಗುತ್ತಿರುವ ಭಾರಿ ಪ್ರಮಾಣದ ನೀರು ಹಾಗೂ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಹದಿನಾಲ್ಕು ತಾಲ್ಲೂಕುಗಳಲ್ಲೂ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶುಕ್ರವಾರದವರೆಗೆ ಒಟ್ಟು 323 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಇದುವರೆಗೆ 28,103 ಕುಟುಂಬಗಳನ್ನು ಸ್ಥಳಾಂತರಿಸಿ, ಪರಿಹಾರ ಕೇಂದ್ರಗಳಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

323 ಗ್ರಾಮಗಳು ಹಾಗೂ ಕೆಲವು ಪಟ್ಟಣ ಪ್ರದೇಶಗಳೂ ಸೇರಿದಂತೆ ಒಟ್ಟಾರೆ 1,45,368 ಜನರನ್ನು ಸ್ಥಳಾಂತರಿಲಾಗಿದೆ.

ಅದೇ ರೀತಿ ಪ್ರವಾಹಕ್ಕೆ ಸಿಲುಕಿದ 43,972 ಜಾನುವಾರುಗಳನ್ನು ಕೂಡ ಸ್ಥಳಾಂತರಿಸುವ ಜೊತೆಗೆ ರಕ್ಷಣೆ ಮತ್ತು ಮೇವಿನ ವ್ಯವಸ್ಥೆ ಕಲ್ಪಿಸಲಾಗಿದೆ.

327 ಪರಿಹಾರ ಕೇಂದ್ರ ಸ್ಥಾಪನೆ: ಜಿಲ್ಲೆಯ ಎಲ್ಲ ಹದಿನಾಲ್ಕು ತಾಲ್ಲೂಕುಗಳಲ್ಲಿ ಇದುವರೆಗೆ 327 ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಊಟೋಪಹಾರ, ವೈದ್ಯಕೀಯ ಸೌಲಭ್ಯ ಸೇರಿದಂತೆ ಎಲ್ಲ ಬಗೆಯ ವ್ಯವಸ್ಥೆ ಒದಗಿಸಲಾಗುತ್ತಿದೆ. ಈ ಪರಿಹಾರ ಕೇಂದ್ರಗಳಲ್ಲಿ 82,425 ಜನರು ಆಶ್ರಯ ಪಡೆದುಕೊಂಡಿದ್ದಾರೆ. ಅದೇ ರೀತಿ ರಕ್ಷಿಸಲಾದ ಹಾಗೂ ಸ್ಥಳಾಂತರಿಸಲಾದ ಜಾನುವಾರುಗಳ ಪೈಕಿ 26,750 ಜಾನುವಾರುಗಳಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಚಿಕ್ಕೋಡಿಯಲ್ಲಿ ಹೆಚ್ಚು ಸ್ಥಳಾಂತರ: ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನಲ್ಲಿ ಅತಿ ಹೆಚ್ಚು 6953 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಅಥಣಿ-4351, ರಾಯಬಾಗ-4349, ಖಾನಾಪುರ-236, ಹುಕ್ಕೇರಿ-975, ಗೋಕಾಕ-1082, ಕಾಗವಾಡ-4599, ನಿಪ್ಪಾಣಿ-2973, ಮೂಡಲಗಿ-1100, ಬೆಳಗಾವಿ-546, ಬೈಲಹೊಂಗಲ-38, ರಾಮದುರ್ಗ-628, ಸವದತ್ತಿ-631 ಹಾಗೂ ಕಿತ್ತೂರು-27 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

3 ಹೆಲಿಕಾಪ್ಟರ್ ನಿಯೋಜನೆ: ಪ್ರವಾಹಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಸೇನೆಯ ಮೂರು ಹೆಲಿಕಾಪ್ಟರ್ಗಳನ್ನು ಬಳಸಿಕೊಂಡು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ನೌಕಾ ಮತ್ತು ವಾಯುಸೇನೆಯ ಯೋಧರು ಒಟ್ಟು 44 ಜನರನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆ ಮುಂದುವರಿದಿದೆ.

ರಾಮದುರ್ಗ ತಾಲ್ಲೂಕಿನ ಹಂಪಿಹೊಳಿ ಮತ್ತು ಬಾಗಲಕೋಟೆಯ ಮುಧೋಳ ತಾಲ್ಲೂಕಿನ ರೂಗಿಯಲ್ಲಿ ರಕ್ಷಣಾ ಕಾರ್ಯ ನಡೆಸಿದೆ.

ಆಹಾರ ಪೊಟ್ಟಣ ವಿತರಣೆ: ಪ್ರವಾಹದಿಂದಾಗಿ ಚಿಕ್ಕೋಡಿ ತಾಲ್ಲೂಕಿನ ಕೆಲ ಗ್ರಾಮಗಳು ನಡುಗಡ್ಡೆಯಂತಾಗಿದ್ದು, ಅಂತಹ ಪ್ರದೇಶಗಳಲ್ಲಿ ಜನರಿಗಾಗಿ ಹೆಲಿಕಾಪ್ಟರ್ ಮೂಲಕ ಆಹಾರ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಸದಲಗಾ, ಇಂಗಳಿ, ಚಂದೂರ ಟೇಕ್, ಯಡೂರವಾಡಿ ಮತ್ತಿತರ ಕಡೆಗಳಲ್ಲಿ ಆಹಾರ ಪೊಟ್ಟಣ ಮತ್ತು ಕುಡಿಯುವ ನೀರಿನ ಬಾಟಲಿಗಳನ್ನು ಸೇನಾ ಹೆಲಿಕಾಪ್ಟರ್ ಮೂಲಕ ಪೂರೈಸಲಾಗುತ್ತಿದೆ.

ಇದಲ್ಲದೇ ಬೆಳಗಾವಿ ನಗರದಲ್ಲಿಯೂ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ, ನಗರಪಾಲಿಕೆಯಿಂದ ನಿರ್ವಹಿಸಲಾಗುತ್ತಿದೆ. ಸೇನೆ, ಪೊಲೀಸ್, ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್, ಗೃಹರಕ್ಷಕ ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಜನರು ಆತಂಕಕ್ಕೆ ಒಳಗಾಗದೇ ತುರ್ತು ಸಂದರ್ಭಗಳಲ್ಲಿ ಸಹಾಯವಾಣಿ ಕೇಂದ್ರಗಳು ಅಥವಾ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.

ಸಂತ್ರಸ್ತರಿಗೆ ಹಾಲು, ಜಾನುವಾರಿಗೆ ಆಹಾರ
ಪ್ರವಾಹದಿಂದ ಸಂತ್ರಸ್ತರಾದವರಿಗೆ ಆರಂಭಿಸಿರುವ ಪರಿಹಾರ ಕೇಂದ್ರಗಳಲ್ಲಿ ಜನರಿಗೆ ವಿತರಿಸಲು ನಂದಿನಿ ಹಾಲು ಹಾಗೂ ಜಾನುವಾರುಗಳಿಗೆ ನಂದಿನಿ ಪಶು ಆಹಾರವನ್ನು ಉಚಿತವಾಗಿ ಒದಗಿಸುವುದಕ್ಕೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿರ್ಧರಿಸಿದೆ.

ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ವಿವೇಕರಾವ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

‘ಜಿಲ್ಲೆಯಲ್ಲಿ ಮಳೆಯ ಅಬ್ಬರದಿಂದಾಗಿ ನೂರಾರು ಕುಟುಂಬಗಳು ಅತಂತ್ರವಾಗಿವೆ. ಹಳ್ಳಿಗಳು ನೀರಿನಲ್ಲಿ ಮುಳುಗಿವೆ. ಜಾನುವಾರುಗಳು ಕೂಡ ಸಂಕಷ್ಟಕ್ಕೆ ಸಿಲುಕಿವೆ. ಇದನ್ನು ಮನಗಂಡು ಸಹಾಯ ಹಸ್ತ ಚಾಚಲು ಒಕ್ಕೂಟ ಮುಂದಾಗಿದೆ. ಆ. 10ರಿಂದ ಪರಿಹಾರ ಕೇಂದ್ರಗಳಲ್ಲಿ ನಂದಿನಿ ಹಾಲು ಮತ್ತು ಪಶು ಆಹಾರವನ್ನು ಉಚಿತವಾಗಿ ವಿತರಿಸಲಾಗುವುದು. ರಾಯಬಾಗ ತಾಲ್ಲೂಕಿನ ಕೇಂದ್ರಗಳಾದ ಬೆಕ್ಕೇರಿ, ಚಿಂಚಲಿ, ಬೀರಡಿ, ಸಿದ್ದಾಪುರ, ಖೇಮಲಾಪುರ ಕೇಂದ್ರಗಳಿಂದ ಆರಂಭಿಸಲಾಗುವುದು. ಒಕ್ಕೂಟದ ಅಧ್ಯಕ್ಷರು, ಆಡಳಿತ ಮಂಡಳಿ ನಿರ್ದೇಶಕರು ಭಾಗವಹಿಸಲಿದ್ದಾರೆ’ ಎಂದು ವ್ಯವಸ್ಥಾಪಕ ನಿರ್ದೇಶಕ ಉಬುದೇಲ್ಲಾ ಖಾನ್ ತಿಳಿಸಿದ್ದಾರೆ.

‘ಹಾಲು ಉತ್ಪಾದಕರು ಒಕ್ಕೂಟಕ್ಕೆ ಪೂರೈಸುವ ಎಮ್ಮೆ ಹಾಗೂ ಆಕಳಿನ ಹಾಲಿಗೆ ಪ್ರತಿ ಲೀಟರ್ಗೆ 50 ಪೈಸೆ ನೀಡಲಾಗುವುದು. ಪ್ರತಿ ಟನ್ ಪಶು ಆಹಾರಕ್ಕೆ ₹ 1ಸಾವಿರ ಸಹಾಯಧನ ಕೊಡುವುದಕ್ಕೂ ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ನಿರ್ದೇಶಕರಾದ ಬಿ.ಬಿ. ಕಟ್ಟಿ, ಎಸ್.ಎಸ್. ಮುಗಳಿ, ಕೆ.ಎನ್. ಗಿರೆಣ್ಣವರ, ಎ.ಪಿ. ಅವತಾಡೆ, ವಿ.ಬಿ. ಈಟಿ, ಆರ್.ಬಿ. ಡೂಗ, ಸಹಕಾರ ಸಂಘಗಳ ಉಪನಿಬಂಧಕ ಕೆ.ಎಲ್. ಶ್ರೀನಿವಾಸ್ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.