ಶುಕ್ರವಾರ, ಜುಲೈ 30, 2021
20 °C

ಬೆಳಗಾವಿಯಲ್ಲಿ ಮುಂದುವರಿದ ಮಳೆ: ಕೃಷಿ ಚಟುವಟಿಕೆಗಳು ಬಿರುಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಮುಂದುವರಿದಿದೆ. ಮಂಗಳವಾರ ರಾತ್ರಿಯಿಂದಲೂ ಜಿಟಿಜಿಟಿ ಮಳೆಯಾಗುತ್ತಿದೆ.

ಕೋವಿಡ್ ಕಾರಣದಿಂದಾಗಿ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಬೆಳಿಗ್ಗೆ 10ರವರೆಗೆ ಅವಕಾಶ ನೀಡಲಾಗಿತ್ತು. ಮಳೆಯ ಕಾರಣದಿಂದಾಗಿ ಗ್ರಾಹಕರು, ರೈತರು ಹಾಗೂ ಬೀದಿಬದಿ ತರಕಾರಿ ವ್ಯಾಪಾರಿಗಳಿಗೆ ಅಡ್ಡಿ ಉಂಟಾಯಿತು.

ಬೈಲಹೊಂಗಲ, ಗೋಕಾಕ, ಚಿಕ್ಕೋಡಿ, ಹಿರೇಬಾಗೇವಾಡಿ, ಖಾನಾಪುರ, ಹುಕ್ಕೇರಿ, ಮುನವಳ್ಳಿ, ಸವದತ್ತಿ, ಎಂ‌.ಕೆ. ಹುಬ್ಬಳ್ಳಿ, ಕಿತ್ತೂರು ಭಾಗದಲ್ಲೂ ಮಳೆಯಾಗುತ್ತಿದೆ.

ಘಟಪ್ರಭಾ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಬುಧವಾರ ಬೆಳಿಗ್ಗೆ 7558 ಕ್ಯುಸೆಕ್ ಒಳಹರಿವು ಇತ್ತು. ಮಳೆಯಿಂದಾಗಿ, ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಗರಿಗೆದರಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು