ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಂ.ಕೆ.ಹುಬ್ಬಳ್ಳಿ| ಭಾರಿ ಮಳೆಗೆ ರಸ್ತೆ ಜಲಾವೃತ: ಮನೆಗಳಿಗೆ ನುಗ್ಗಿದ ನೀರು

Published 7 ಜೂನ್ 2024, 15:32 IST
Last Updated 7 ಜೂನ್ 2024, 15:32 IST
ಅಕ್ಷರ ಗಾತ್ರ

ಎಂ.ಕೆ.ಹುಬ್ಬಳ್ಳಿ: ಪಟ್ಟಣದಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ಮಳೆ ರಭಸಕ್ಕೆ ಚರಂಡಿಗಳು ತುಂಬಿಕೊಂಡು ನೀರು, ಚರಂಡಿ ತ್ಯಾಜ್ಯವು ರಸ್ತೆಗಳಲ್ಲಿ ಹರಿಯಿತು. ರಸ್ತೆ ಪಕ್ಕದಲ್ಲಿದ್ದ ಮನೆಗಳಿಗೂ ನೀರು ನುಗ್ಗಿದ್ದರಿಂದ ನಿವಾಸಿಗಳು ಪರದಾಡುವಂತಾಯಿತು.

ಹೆದ್ದಾರಿಯ ಕೆಳಸೇತುವೆ, ಪಟ್ಟಣದ ಒಳ ಮುಖ್ಯರಸ್ತೆ ಜಲಾವೃತಗೊಂಡಿದ್ದವು. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು.

‘ಪ್ರತಿ ಬಾರಿ ಜೋರು ಮಳೆಯಾದಾಗ ರಸ್ತೆಗಳಲ್ಲಿ ನೀರು ತುಂಬಿಹರಿದು ಸಾಕಷ್ಟು ಸಮಸ್ಯೆ ಸೃಷ್ಟಿಯಾಗುತ್ತದೆ. ಪಟ್ಟಣ ಪಂಚಾಯ್ತಿಯು ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಬೇಕು’ ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಎಂ.ಕೆ.ಹುಬ್ಬಳ್ಳಿಯಲ್ಲಿ ಶುಕ್ರವಾರ ಸುರಿದ ಮಳೆಯಿಂದ ಮುಖ್ಯರಸ್ತೆ ಜಲಾವೃತಗೊಂಡಿರುವುದು
ಎಂ.ಕೆ.ಹುಬ್ಬಳ್ಳಿಯಲ್ಲಿ ಶುಕ್ರವಾರ ಸುರಿದ ಮಳೆಯಿಂದ ಮುಖ್ಯರಸ್ತೆ ಜಲಾವೃತಗೊಂಡಿರುವುದು
ಎಂ.ಕೆ.ಹುಬ್ಬಳ್ಳಿಯಲ್ಲಿ ಶುಕ್ರವಾರ ಸುರಿದ ಮಳೆಯಿಂದ ಮುಖ್ಯರಸ್ತೆ ಜಲಾವೃತಗೊಂಡಿದ್ದು ವಾಹನ ಸವಾರರೊಬ್ಬರು ಹರಸಾಹಸಪಟ್ಟು ಸಾಗಿದರು
ಎಂ.ಕೆ.ಹುಬ್ಬಳ್ಳಿಯಲ್ಲಿ ಶುಕ್ರವಾರ ಸುರಿದ ಮಳೆಯಿಂದ ಮುಖ್ಯರಸ್ತೆ ಜಲಾವೃತಗೊಂಡಿದ್ದು ವಾಹನ ಸವಾರರೊಬ್ಬರು ಹರಸಾಹಸಪಟ್ಟು ಸಾಗಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT