ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರೇಬಾಗೇವಾಡಿ| ಭಾರಿ ಮಳೆ: ಮನೆ, ಅಂಗಡಿಗಳಿಗೆ ನುಗ್ಗಿದ ನೀರು

Published 7 ಜೂನ್ 2024, 15:39 IST
Last Updated 7 ಜೂನ್ 2024, 15:39 IST
ಅಕ್ಷರ ಗಾತ್ರ

ಹಿರೇಬಾಗೇವಾಡಿ: ಶುಕ್ರವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಬೆಳಗಾವಿ -ಸವದತ್ತಿ ರಾಜ್ಯ ಹೆದ್ದಾರಿ ಮೇಲೆ ನೀರು ನುಗ್ಗಿ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು.

ಸುಮಾರು ಒಂದು ಗಂಟೆ ಕಾಲ ಸುರಿದ ಮಳೆಯಿಂದಾಗಿ ಚರಂಡಿಗಳು ತುಂಬಿಕೊಂಡು ರಸ್ತೆ ಮೇಲೆ ಚರಂಡಿ ತ್ಯಾಜ್ಯ, ಮಳೆ ನೀರು ಹರಿಯಿತು. ಗಾಂಧಿ ನಗರದ ಜನತಾ ಕಾಲೊನಿ, ಬಸವನಗರದ ಮನೆಗಳಿಗೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯನ್ನುಂಟು ಮಾಡಿತು. ಮಳೆ ನೀರು ಹೊರಹಾಕಲು ನಿವಾಸಿಗಳು ಪರದಾಡುವಂತಾಯಿತು.

ಹಿರೇಬಾಗೇವಾಡಿಯಲ್ಲಿ ಶುಕ್ರವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಗಾಂಧಿನಗರ ಬಳಿಯ ಜನತಾ ಕಾಲೊನಿ ಜಲಾವೃತವಾಗಿರುವುದು
ಹಿರೇಬಾಗೇವಾಡಿಯಲ್ಲಿ ಶುಕ್ರವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಗಾಂಧಿನಗರ ಬಳಿಯ ಜನತಾ ಕಾಲೊನಿ ಜಲಾವೃತವಾಗಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT