ಬೆಳಗಾವಿ: ‘ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಪೆನಲ್ನಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಸ್ಪರ್ಧೆ ಮಾಡಲಿದ್ದಾರೆ’ ಎಂದು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಬುಧವಾರ ಜರುಗಿದ ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣಾ ಪ್ರಚಾರಕ್ಕೂ ಮುನ್ನ ಅಂದರೆ; ಎರಡು ತಿಂಗಳ ಹಿಂದೆಯೇ ರಾಮದುರ್ಗ ತಾಲ್ಲೂಕಿನ ಅಭ್ಯರ್ಥಿ ಆಯ್ಕೆ ಮಾಡುವುದರ ಸಂಬಂಧ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಸೇರಿದಂತೆ ಅನೇಕ ಗಣ್ಯರ ಅಭಿಪ್ರಾಯ ಕೇಳಲಾಗಿತ್ತು. ಮೂರು ಬಾರಿ ನಿಯೋಜಿತ ಸಭೆಯನ್ನು ಮುಂದೂಡಲಾಗಿತ್ತು. ಅನೇಕ ಬಾರಿ ಸಂಪರ್ಕಿಸಿದರೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಸ್ಪಷ್ಟ ನಿರ್ಧಾರ ಹೇಳಲಿಲ್ಲ. ನಾವು ತೆಗೆದುಕೊಂಡ ನಿರ್ಧಾರಕ್ಕೆ ನಾವುಗಳ ಬದ್ಧರು ಎಂಬುದಾಗಿ ತಿಳಿಸಿದ್ದಾರೆ’ ಎಂದರು.

‘ಮಲ್ಲಣ್ಣ ಯಾದವಾಡ ಅವರು ಅಭ್ಯರ್ಥಿ ಆಯ್ಕೆ ಬಗ್ಗೆ ಏನೂ ಹೇಳಲಿಲ್ಲ. ಬದಲಿಗೆ ಬೆಳಗಾವಿಯಲ್ಲಿ ಬಿಡಿಸಿಸಿ ಬ್ಯಾಂಕಿಗೆ ನಾನು ಸಹ ಆಕಾಂಕ್ಷಿಯಾಗಿದ್ದೇನೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದು ಏಕಪಕ್ಷೀಯ ನಿರ್ಧಾರ. ನಾವು ಒಗ್ಗಟ್ಟಿನಿಂದ ಅಭ್ಯರ್ಥಿ ಹಾಕೋಣವೆಂದರೂ ಇದಕ್ಕೆ ಅವರುಗಳು ಸೊಪ್ಪು ಹಾಕಲಿಲ್ಲ. ಈಗಾಗಲೇ ಪ್ರಚಾರವನ್ನು ಆರಂಭಿಸಿರುವ ಮಲ್ಲಣ್ಣ ಯಾದವಾಡ ಅವರ ನಿರ್ಧಾರದಿಂದ ಕಾರ್ಯಕರ್ತರಲ್ಲಿ ಗೊಂದಲವಾಗಿದೆ. ಈಗ 36 ಪಿಕೆಪಿಎಸ್ಗಳ ಪೈಕಿ ಸುಮಾರು 29 ಪಿಕೆಪಿಎಸ್ ಪ್ರತಿನಿಧಿಗಳು ಸೇರಿ ಢವಣ ಅವರನ್ನು ಅಭ್ಯರ್ಥಿಯನ್ನಾಗಿ ಹೇಳಿದ್ದಾರೆ’ ಎಂದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗೋಡೆ, ಮಾಜಿ ಶಾಸಕ ಅರವಿಂದ ಪಾಟೀಲ, ರಾಜೇಂದ್ರ ಅಂಕಲಗಿ, ಬಿ.ಎಸ್. ಬೆಳವಣಕಿ, ಸಿ.ಬಿ.ಪಾಟೀಲ, ಡಾ. ಕೆ.ವಿ.ಪಾಟೀಲ, ರಾಮದುರ್ಗ ಕ್ಷೇತ್ರದ ಅಭ್ಯರ್ಥಿ ಶ್ರೀಕಾಂತ ಢವಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.