ರಾಮದುರ್ಗ: ತಾಲ್ಲೂಕಿನ ರೈತರ ಬಹುದಿನಗಳ ಬೇಡಿಕೆಯಾದ ವೀರಭದ್ರೇಶ್ವರ, ಬಸವೇಶ್ವರ ಏತ ನೀರಾವರಿ ಯೋಜನೆಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘವು ರಾಜ್ಯ ಸರ್ಕಾರ ಮತ್ತು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ವಿರುದ್ಧ ರಾಜ್ಯ ಹೆದ್ದಾರಿ ತಡೆದು ಸೋಮವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಸಾಲಹಳ್ಳಿಯಲ್ಲಿ ವಿಜಯಪುರ– ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಬೆಳಿಗ್ಗೆ ಗೊಡಚಿ ಕ್ಷೇತ್ರದಿಂದ ಸಾಲಹಳ್ಳಿಯ ಮುಖ್ಯ ವೇದಿಕೆ ತನಕ 7 ಕಿ.ಮೀ. ಪಾದಯಾತ್ರೆ ನಡೆಸಿ ಮಧ್ಯಾಹ್ನದ ಹೊತ್ತಿಗೆ ಸಮಾವೇಶ ನಡೆಸಿದರು. ಸಹಸ್ರಾರು ರೈತರು ಘೋಷಣೆಗಳನ್ನು ಕೂಗಿದರು.

ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ಮಾತನಾಡಿ, ‘ಏತ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲಿ ಆರಂಭಿಸುವುದಾಗಿ ಅಶೋಕ ಪಟ್ಟಣ ಅವರು ಸ್ಥಳಕ್ಕೆ ಆಗಮಿಸಿ ಲಿಖಿತವಾಗಿ ಭರವಸೆ ನೀಡಬೇಕು. ಇಲ್ಲದಿದ್ದರೆ ಮೇ 26ರಂದು ರಾಮದುರ್ಗ ಪಟ್ಟಣ ಸೇರಿ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಬಂದ್ ಆಚರಿಸಲಾಗುವುದು. ಮುಂದೊಂದು ದಿನ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ’ ಎಂದು ಎಚ್ಚರಿಕೆ ನೀಡಿದರು.

ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಎಂ.ಚಂದರಗಿಯ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಕುಳ್ಳೂರಿನ ಬಸವಾನಂದ ಸ್ವಾಮೀಜಿ, ಹೊಸಕೋಟಿಯ ಅಭಿನವ ರೇವಯ್ಯ ಶಿವಯೋಗಿಗಳು, ಚಿಪ್ಪಲಕಟ್ಟಿಯ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಕಟಕೋಳದ ಅಭಿನವ ಸಿದ್ಧರಾಯ ಅಜ್ಜನವರು, ತೊಂಡಿಕಟ್ಟಿಯ ಅಭಿನವ ವೆಂಕಟೇಶ ಮಹಾರಾಜರು, ಮುಳ್ಳೂರಿನ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ತಾಲ್ಲೂಕಿನ ಮಠಾಧೀಶರು, ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಡಿಸಿಸಿ ಬ್ಯಾಂಕಿನ ನಿರ್ದೇಶಕ ಮಲ್ಲಣ್ಣ ಯಾದವಾಡ, ಬಿಜೆಪಿ ಮಂಡಲ ಅಧ್ಯಕ್ಷ ಕೆ.ವಿ. ಪಾಟೀಲ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಜಗದೀಶ ದೇವರಡ್ಡಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-21-1796143216

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.