ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಕ್ಷೇತ್ರ | ಮೃಣಾಲ್ ಪರ ಮತಯಾಚನೆ; ಕಾಂಗ್ರೆಸ್ ಕಾರ್ಯಕರ್ತರ ಸಭೆ ಇಂದು

Published 1 ಏಪ್ರಿಲ್ 2024, 15:13 IST
Last Updated 1 ಏಪ್ರಿಲ್ 2024, 15:13 IST
ಅಕ್ಷರ ಗಾತ್ರ

ರಾಮದುರ್ಗ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಪರ ಮತಯಾಚಿಸಲು ಏ.2ರಂದು ಪಟ್ಟಣದ ರಾಠಿ ಫಾರ್ಮ್‌ ಹೌಸ್‍ನಲ್ಲಿ ಸಂಜೆ 4ಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮಿ  ಹೆಬ್ಬಾಳಕರ, ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ, ವಿಧಾನಸಭೆ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ತಾಲ್ಲೂಕಿನಿಂದ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಕಳೆದ ವಿಧಾನ ಸಭೆ ಚುನಾವಣೆಗೂ ಮುನ್ನ ಪ್ರತಿ ತಿಂಗಳು 30 ರಂದು ಕಾರ್ಯಕರ್ತರ ಸಭೆ ನಡೆಸಲಾಗುತ್ತಿತ್ತು. ಈಗ ನಮ್ಮದೇ ಸರ್ಕಾರ ಇರುವುದರಿಂದ ಸಭೆ ಕರೆದಿಲ್ಲ. ಕಾರ್ಯಕರ್ತರು ಶಾಸಕರ ಕಚೇರಿಗೆ ಆಗಮಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎರಡ್ಮೂರು ತಿಂಗಳಿಗೊಮ್ಮೆ ಕಾರ್ಯಕರ್ತರ ಸಭೆ ನಡೆಸಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ಬಿ. ರಂಗನಗೌಡ್ರ, ಕೆಪಿಸಿಸಿ ಸದಸ್ಯ ಸುರೇಶ ಪತ್ತೇಪೂರ, ನಗರ ಘಟಕದ ಅಧ್ಯಕ್ಷ ಸೋಮಶೇಖರ ಸಿದ್ಲಿಂಗಪ್ಪನವರ, ಎಸ್. ಎನ್. ಸಿಂಗಾರಗೊಪ್ಪ, ಪರಪ್ಪ ಜಂಗವಾಡ, ಪ್ರದೀಪ ಪಟ್ಟಣ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT