ರಾಮದುರ್ಗ: ಇಲ್ಲಿನ ವೀರಭದ್ರೇಶ್ವರ ಮತ್ತು ಬಸವೇಶ್ವರ ಏತ ನೀರಾವರಿ ಯೋಜನೆಗಳನ್ನು ಶೀಘ್ರ ಮುಗಿಸಬೇಕು ಎಂದು ಆಗ್ರಹಿಸಿ ಸೋಮವಾರ ಸಾಲಹಳ್ಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆಯುತ್ತಿದ್ದ ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ ಪಟ್ಟಣ ಅವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಹೋರಾಟ ಅಂತ್ಯಗೊಂಡಿತು.

ಬಸವೇಶ್ವರ ಏತ ನೀರಾವರಿಯನ್ನು ಮಾರ್ಚ್ 2027 ಮತ್ತು ವೀರಭದ್ರೇಶ್ವರ ಏತ ನೀರಾವರಿಯನ್ನು ಡಿಸೆಂಬರ್ 2027ರ ಒಳಗಾಗಿ ಪೂರ್ಣಗೊಳಿಸಿ ನೀರು ಹರಿಸುವುದಾಗಿ ಅವರು ಭರವಸೆ ನೀಡಿದರು.

‘ಹೋರಾಟದ ವೇಳೆ ರೈತರ ನಿಂದನೆ, ಹೊಗಳಿಕೆ ಎಲ್ಲವನ್ನೂ ಗಮನಿಸಿದ್ದೇನೆ. ಮಂಗಳವಾರದ ವೇಳೆಗೆ ಹೋರಾಟವು ಉಗ್ರ ಸ್ವರೂಪ ಪಡೆದುಕೊಳ್ಳಬಾರದು ಎಂದು ತರಾತುರಿಯಲ್ಲಿ ಆಗಮಿಸಿ ಮಧ್ಯರಾತ್ರಿ ರೈತರನ್ನು ಭೇಟಿ ಮಾಡಿದ್ದೇನೆ. ಭೂಮಿ ಕಳೆದುಕೊಂಡವರಿಗೆ ಪರಿಹಾರ ಮತ್ತು ಭೂಸ್ವಾದೀನ ಕೆಲಸಗಳನ್ನು ವೈಯಕ್ತಿಕವಾಗಿ ಓಡಾಡಿ ಮಾಡಿಕೊಡುತ್ತೇನೆ. ಅಧಿಕಾರಿಗಳನ್ನು ನಂಬಿದರೆ ಚುನಾಯಿತ ಪ್ರತಿನಿಧಿಗಳ ಹೆಸರು ಉಳಿಯುವುದಿಲ್ಲ ಎಂಬುದು ಅರಿವಾಗಿದೆ. ಏತ ನೀರಾವರಿ ಯೋಜನೆಗಳ ಕಾಮಗಾರಿಯಲ್ಲಿ ವಿಳಂಬವಾಗಿದ್ದಕ್ಕೆ ರೈತರ ಕ್ಷಮೆ ಕೋರುವೆ’ ಎಂದರು.

ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಎಂ.ಚಂದರಗಿಯ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಕುಳ್ಳೂರಿನ ಬಸವಾನಂದ ಸ್ವಾಮೀಜಿ, ಹೊಸಕೋಟಿಯ ಅಭಿನವ ರೇವಯ್ಯ ಶಿವಯೋಗಿಗಳು, ಚಿಪ್ಪಲಕಟ್ಟಿಯ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಕಟಕೋಳದ ಅಭಿನವ ಸಿದ್ಧರಾಯ ಅಜ್ಜನವರು, ತೊಂಡಿಕಟ್ಟಿಯ ಅಭಿನವ ವೆಂಕಟೇಶ ಮಹಾರಾಜರು, ಮುಳ್ಳೂರಿನ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ, ಬಿಜೆಪಿ ಮಂಡಲ ಅಧ್ಯಕ್ಷ ಕೆ.ವಿ. ಪಾಟೀಲ, ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ, ಗೌರವಾಧ್ಯಕ್ಷ ಶಶಿಕಾಂತ ಗುರೂಜಿ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಜಗದೀಶ ದೇವರಡ್ಡಿ, ಶಿವಾನಂದ ದೊಡವಾಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-21-1294041768

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.