ರಾಮದುರ್ಗ: ತಾಲ್ಲೂಕಿನ ರೈತರ ಬಹುದಿನಗಳ ನಿರೀಕ್ಷಿತ ಎರಡು ಬಹುದೊಡ್ಡ ನೀರಾವರಿ ಯೋಜನೆಗಳನ್ನು ಮರು ಟೆಂಡರ್ ಕರೆದು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ರಾಮದುರ್ಗ ತಾಲ್ಲೂಕಿನ ಸಿದ್ನಾಳ ಗ್ರಾಮದಲ್ಲಿ ರಾಯಚೂರು-ಬಾಚಿ ಹೆದ್ದಾರಿಗೆ ಕೂಡು ರಸ್ತೆಯನ್ನು ₹ 30 ಲಕ್ಷ ವೆಚ್ಚದಲ್ಲಿ ಮತ್ತು ಹಾಲೊಳ್ಳಿ ಗ್ರಾಮದಲ್ಲಿ ₹ 42 ಲಕ್ಷದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ವೀರಭದ್ರೇಶ್ವರ ಏತ ನೀರಾವರಿ ಮತ್ತು ಬಸವೇಶ್ವರ ಏತ ನೀರಾವರಿ ಯೋಜನೆಗಳು ರಾಮದುರ್ಗದ ರೈತ ಕಷ್ಟಗಳನ್ನು ದೂರ ಮಾಡುವ ಯೋಜನೆಗಳಾಗಿವೆ. ಅವುಗಳನ್ನು ಪೂರ್ಣಗೊಳಿಸಿ ಶೀಘ್ರದಲ್ಲಿ ನೀರು ಹರಿಸಲಾಗುವುದು’ ಎಂದು ತಿಳಿಸಿದರು.

10ಕ್ಕೂ ಹೆಚ್ಚಿನ ವರ್ಷಗಳಲ್ಲಿ ಯೋಜನೆಯ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗಿದ್ದವು. ರಾಜ್ಯ ಸರ್ಕಾರದ ₹ 15 ಕೋಟಿಯಷ್ಟು ಅನುದಾನ ಬಳಸಿ ಕಾಮಗಾರಿ ಆರಂಭಿಸಿದ್ದವು. ಆದರೆ ಹಿಂದಿನ ಅಂದಾಜು ಪತ್ರಿಕೆಯಂತೆ ಕಾಮಗಾರಿ ಮಾಡಲು ಸಾಧ್ಯವಿಲ್ಲ ಎಂದು ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದ್ದಾರೆ. ಅದನ್ನು ಮರು ಟೆಂಡರ್ ಕರೆದು ವೀರಭದ್ರೇಶ್ವರ ಏತ ನೀರಾವರಿ ಯೋಜನೆಯನ್ನು ಮುಂದಿನ ವರ್ಷದ ಮೇ ವೇಳೆಗೆ ಮತ್ತು ಬಸವೇಶ್ವರ ಏತ ನೀರಾವರಿ ಯೋಜನೆಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮದ ಮುಖಂಡರಾದ ಬಸನಗೌಡ ದ್ಯಾವನಗೌಡರ, ಸಂಗನಗೌಡ ಪಾಟೀಲ, ಯಲ್ಲನಗೌಡ ಪಾಟೀಲ, ಈರಪ್ಪ ಕೊಡ್ಲಿವಾಡ, ಮಲ್ಲಿಕಾರ್ಜುನ ಸಿಂಗಾರಗೊಪ್ಪ, ಬಸಪ್ಪ ಗವನ್ನವರ, ಉಮೇಶ ಕೂಡ್ಲಗೇರಿ, ಜಿ.ಬಿ. ರಂಗನಗೌಡರ, ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಎಇಇ ಮೋಹಿನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-21-761988591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.