ರಾಮದುರ್ಗ: ಭವಿಷ್ಯದ ಪ್ರಜೆಗಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟದ ತಯಾರಿಸುವ ಕಾರ್ಯಕರ್ತೆಯರು ಅಡುಗೆ ಮಾಡುವ ವೇಳೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ವಿಧಾನ ಸಭೆಯ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ (ಮಧ್ಯಾಹ್ನ ಉಪಹಾರ ಯೋಜನೆ) ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಪ್ರದಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯಶಸ್ವಿ ಅನುಷ್ಠಾನಕ್ಕಾಗಿ 2025-26ನೇ ಸಾಲಿನ ತಾಲ್ಲೂಕಿನ ಎಲ್ಲ ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಗೆ ಬಡವರ ಮಕ್ಕಳು ಬರುತ್ತಾರೆ. ಶಾಲೆಗೆ ಬರುವವರೆಲ್ಲ ನಿಮ್ಮ ಮಕ್ಕಳು ಎಂದು ಭಾವಿಸಿ ಶುದ್ಧ ಮತ್ತು ಸ್ವಚ್ಚವಾದ ಅಡುಗೆ ತಯಾರಿಸಬೇಕು. ಸರ್ಕಾರ ಸರ್ಕಾರಿ ಶಾಲೆಗಳ ಮಕ್ಕಳಿಗೆ ಊಟ, ಉಪಹಾರ, ಹಾಲು ಮತ್ತು ಪೌಷ್ಠಿಕಾಂಶಗಳ ಜೊತೆಗೆ ಪುಸ್ತಕ, ಸಮವಸ್ತ್ರ ನೀಡಿದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ನಿಜಗುಲಿ, ಜಿಲ್ಲಾ ಕಾರ್ಯದರ್ಶಿ ಎಸ್.ವಿ. ಪಾಟೀಲ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎನ್. ಯಡ್ರಾಂವಿ, ಅಕ್ಷರ ದಾಸೋಹ ಅಡುಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷೆ ತುಳಸಾ ಮಾಳದಕರ ಇದ್ದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರಾಜಶೇಖರ ಹಿರೇಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರು ಕಲ್ಲೂರ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-21-2058185436

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.