ಮಲಪ್ರಭಾ ನದಿ, ಎಡದಂಡೆ ಕಾಲುವೆಗೆ ನೀರು ಬಿಡುಗಡೆಗೆ ಆಗ್ರಹ

7

ಮಲಪ್ರಭಾ ನದಿ, ಎಡದಂಡೆ ಕಾಲುವೆಗೆ ನೀರು ಬಿಡುಗಡೆಗೆ ಆಗ್ರಹ

Published:
Updated:
Deccan Herald

ಬೆಳಗಾವಿ: ಸವದತ್ತಿ ತಾಲ್ಲೂಕು ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿ ಹಾಗೂ ಎಡದಂಡೆ ಕಾಲುವೆಗೆ ನೀರು ಬಿಡುಗಡೆಗೆ ಮಾಡುವಂತೆ ಆಗ್ರಹಿಸಿ ರಾಮದುರ್ಗ ಮತಕ್ಷೇತ್ರದ ಶಾಸಕ ಮಹಾದೇವಪ್ಪ ಯಾದವಾಡ ರೈತರೊಂದಿಗೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ರಾಮದುರ್ಗ ತಾಲ್ಲೂಕಿನಲ್ಲಿ ಈ ಮುಂಗಾರು ಹಂಗಾಮಿನಲ್ಲಿ ಸರಿಯಾಗಿ ಮಳೆಯಾಗಿಲ್ಲ. ಅಂತರ್ಜಲ ಮಟ್ಟ ಕುಸಿದಿದ್ದು, ಬಹುತೇಕ ಕೊಳವೆಬಾವಿಗಳು ಬತ್ತಿ ಹೋಗುವ ಸ್ಥಿತಿಯಲ್ಲಿವೆ. ಜನರು ಹಾಗೂ ಜಾನುವಾರುಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಹೀಗಾಗಿ, ತಾಲ್ಲೂಕನ್ನು ಬರಗಾಲಪೀಡಿತ ಎಂದು ಘೋಷಿಸಬೇಕು’ ಎಂದು ಒತ್ತಾಯಿಸಿದರು.

‘ಮಲಪ್ರಭಾ ನದಿ ಹಾಗೂ ಎಡದಂಡೆ ಕಾಲುವೆಗೆ 15ರಿಂದ 20 ದಿನಗಳವರೆಗೆ ನಿರಂತರವಾಗಿ ನೀರು ಹರಿಸಬೇಕು. ತಮ್ಮ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಉಂಟಾಗಿರುವ ನೀರಿನ ಅಭಾವ ನೀಗಿಸಬೇಕು’ ಎಂದು ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ ಹಾಗೂ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರಿಗೆ ಮನವಿ ಸಲ್ಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !