ರಾಮದುರ್ಗ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳೇ ಮೇಲುಗೈ ಸಾಧಿಸಿವೆ. ಸರ್ಕಾರಿ ಶಾಲೆಗಳಲ್ಲಿ ಕಲಿತ ಮಕ್ಕಳು ಉನ್ನತ ಸ್ಥಾನಕ್ಕೇರಿದ್ದಾರೆ. ಎಲ್ಲರೂ ಸರ್ಕಾರಿ ಶಾಲೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ವಕೀಲೆ ಜಮುನಾ ಪಟ್ಟಣ ಹೇಳಿದರು.

ಎಸ್ಎಸ್ಎಲ್ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಾಮದುರ್ಗದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಾಮಾಣಿಕ ವಿದ್ಯಾರ್ಥಿಗಳು ಶಿಕ್ಷಣ ಮುಂದುವರೆಸಲು ತೊಂದರೆ ಇದ್ದರೆ ಸಹಾಯ ಮಾಡುವುದಾಗಿ ತಿಳಿಸಿದರು.

ರಾಮದುರ್ಗದ ಠಾಣೆಯಲ್ಲಿ ಒಬ್ಬ ಮಹಿಳಾ ಪಿಎಸ್ಐ ಇದ್ದರೂ ಠಾಣೆಗೆ ಬರಲು ಕೆಲವರು ಹಿಂಜರಿಕೆ ವ್ಯಕ್ತ ಪಡಿಸುತ್ತಿದ್ದಾರೆ. ಮಕ್ಕಳಂತೂ ಠಾಣೆ ಕಡೆಗೆ ಇಣುಕಿ ಸಹ ನೋಡುತ್ತಿಲ್ಲ. ಪೊಲೀಸರೊಂದಿಗೆ ಸೌಹಾರ್ದ ಮತ್ತು ಜನಸ್ನೇಹಿಯಾಗಿ ಹೊಂದಿಕೊಳ್ಳುವ ಉದ್ದೇಶದಿಂದ ಮಕ್ಕಳಿಗೆ ಸನ್ಮಾನ ಮಾಡಲಾಗುತ್ತಿದೆ ಎಂದು ಪಿಎಸ್ಐ ಸವಿತಾ ಮುನ್ಯಾಳ ಹೇಳಿದರು.

ಆದರ್ಶ ವಿದ್ಯಾಲಯದ ಶಿಕ್ಷಕ ಬಿ.ಎಚ್. ನಾಗಮ್ಮನವರ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-21-111259554

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.