ರಾಮದುರ್ಗ: ರಾಜ್ಯ ರಾಜಕಾರಣದಲ್ಲಿ ವಿಶೇಷ ಛಾಪು ಮೂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕುರುಬ ಸಮಾಜಕ್ಕೆ ನೋವುಂಟಾಗಿದೆ. ಮುಂದಿನ ದಿನಗಳಲ್ಲಿ ಸಮಾಜ ತೆಗೆದುಕೊಳ್ಳುವ ನಿರ್ಣಯಗಳನ್ನು ಚಾಚೂ ತಪ್ಪದೆ ಪಾಲಿಸುತ್ತೇವೆ ಎಂದು ರಾಮದುರ್ಗ ತಾಲ್ಲೂಕು ಕುರುಬ ಸಮಾಜದ ಗೌರವಾಧ್ಯಕ್ಷ ಸೋಮಶೇಖರ ಸಿದ್ಲಿಂಗಪ್ಪನವರ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಕುರುಬ ಸಮಾಜವನ್ನು ಕಡೆಗಣಿಸಿ ಪ್ರಶ್ನಾತೀತ ನಾಯಕ ಸಿದ್ದರಾಮಯ್ಯ ಅವರಿಗೆ ಅನ್ಯಾಯ ಮಾಡಿದೆ. ಅಹಿಂದ್ ನಾಯಕರಾಗಿ ಪಕ್ಷ ಸಂಘಟನೆ ಮಾಡಿ ಸುಮಾರು 136 ಸ್ಥಾನಗಳನ್ನು ಗೆದ್ದಿರುವ ಸಿದ್ದರಾಮಯ್ಯ ಅವರನ್ನು ಮಧ್ಯದಲ್ಲಿ ಪದತ್ಯಾಗ ಮಾಡಲು ಸೂಚನೆ ನೀಡಿರುವುದು ಸಹಿಸುವಂತಿಲ್ಲ ಎಂದು ತಿಳಿಸಿದರು.

ಸುಮಾರು 7–8 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಸಿದ್ದರಾಮಯ್ಯ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದಂತಹ ಸುಭದ್ರ ಆಡಳಿತ ನಡೆಸಿದ್ದಾರೆ. ಸಿದ್ದರಾಮಯ್ಯನವರ ಪದತ್ಯಾಗಕ್ಕೆ ಪ್ರತಿಫಲವಾಗಿ ಕುರುಬ ಸಮಾಜ, ಅಹಿಂದ ಸಂಘಟನೆ ತೆಗೆದುಕೊಳ್ಳುವ ನಿರ್ಧಾರವನ್ನು ರಾಮದುರ್ಗ ತಾಲ್ಲೂಕು ಕುರುಬ ಸಮಾಜ, ಅಹಿಂದ ಸಂಘಟನೆ ಪ್ರಾಮಾಣಿಕ ಪಾಲಿಸುತ್ತೇನೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕುರುಬ ಸಮಾಜದ ಮುಖಂಡರಾದ ಅಶೋಕ ಮೆಟಗುಡ್ಡ, ಫಕೀರಪ್ಪ ಕೊಂಗವಾಡ, ಈರಣ್ಣ ಕಾಮನ್ನವರ, ಹನಮಂತ ಕಿತ್ತೂರ, ಸಿದ್ದಪ್ಪ ಮಕ್ಕನ್ನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.