ರಾಮದುರ್ಗ: ಭವಿಷ್ಯದ ಪೀಳಿಗೆಯ ಅಗತ್ಯಗಳನ್ನು ರಾಜೀ ಮಾಡಿಕೊಳ್ಳದೇ ಪ್ರಸ್ತುತ ಅಗತ್ಯತೆಗಳನ್ನು ಪೂರೈಸುವ ಅಭಿವೃದ್ಧಿಯ ಪ್ರಕ್ರಿಯೆಗೆ ಪ್ರತಿಯೊಬ್ಬರೂ ಒತ್ತು ನೀಡಬೇಕು. ಸಮಯ ಪಾಲನೆ, ಸ್ಪಷ್ಟ ಯೋಜನೆ ಮತ್ತು ನಿರಂತರ ಅಧ್ಯಯನ ಅಧ್ಯಾಪಕ ಹೊಂದಬೇಕು ಎಂದು ನಿವೃತ್ತ ಪ್ರಾಚಾರ್ಯ ಪ್ರೊ.ಎಸ್.ಎಂ. ಸಕ್ರಿ ಹೇಳಿದರು.

ಪಟ್ಟಣದ ವಿದ್ಯಾ ಪ್ರಸಾರಕ ಸಮಿತಿಯ ಸಿ.ಎಸ್. ಬೆಂಬಳಗಿ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಯೋಜನಾ ವೇದಿಕೆ ಮತ್ತು ಐಕ್ಯೂಎಸಿ ಅಡಿಯಲ್ಲಿ ಜರುಗಿದ ಸುಸ್ಥಿರ ಅಭಿವೃದ್ಧಿಯು ಭಾರತದ ಆರ್ಥಿಕ ಪ್ರಗತಿಗೆ ಪ್ರಮುಖ ಅಂಶ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೈಸರ್ಗಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಕೆ ಮಾಡಿಕೊಂಡು ಪರಿಸರಕ್ಕೆ ಹಾನಿಯಾಗದಂತೆ ಸುದೀರ್ಘ ಅವಧಿಯ ಅಭಿವೃದ್ಧಿ ಹೊಂದುವುದೇ ಇದರ ಮುಖ್ಯ ಉದ್ದೇಶ ಎಂದು ತಿಳಿಸಿದರು.

ಸಂಖ್ಯಾಶಾಸ್ತ್ರ ವಿಷಯದಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿನಿ ರತ್ನಾ ಹಿರೇಮಠ ಹಾಗೂ ಮಹಾದೇವಿ ಗೋವನಕೊಪ್ಪ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ.ಪಿ.ಬಿ. ತೆಗ್ಗಿಹಳ್ಳಿ ವಹಿಸಿದ್ದರು. ಶಶಿಕುಮಾರ ಜಿ.ತೋಟದ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಜಿ.ಬಿ.ಮುರಗೋಡ ಮಾತನಾಡಿದರು. ತನುಶ್ರೀ ಮತ್ತು ಅಜುಮಾ ನಿರೂಪಿಸಿದರು. ಕುಮಾರ ಭೀಮಪ್ಪ ಜಾಡಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-21-892946037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.