ಗೋಕಾಕ : ‘ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಧಾರ್ಮಿಕ ಕಾರ್ಯಕ್ರಮವನ್ನು ಜಾತಿ, ಮತ, ಪಂಥ ಮರೆತು ಆನಂದೋತ್ಸವದಿಂದ ಆಚರಿಸಬೇಕು. ಇದರಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕಿರುವ ಕಾರಣ ಅಂದು ಶಾಲೆಗಳಿಗೆ ಸರ್ಕಾರವು ರಜೆ ಘೋಷಿಸಬೇಕು’ ಎಂದು ಶಾಸಕ ರಮೇಶ ಜಾರಕಿಹೊಳಿ ಒತ್ತಾಯಿಸಿದರು.

ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ ಬುಧವಾರ ಕ್ಷೇತ್ರದಲ್ಲಿ ಆಚರಿಸುವ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಜನವರಿ 21 ಮತ್ತು 22ರಂದು ಕ್ಷೇತ್ರದ ಎಲ್ಲ ಗ್ರಾಮ, ಪಟ್ಟಣ, ನಗರಗಳಲ್ಲಿ ಮಠಾಧೀಶರ, ಜನಪ್ರತಿನಿಧಿಗಳ, ಮುಖಂಡರ ಮಾರ್ಗದರ್ಶನದಲ್ಲಿ ಪಕ್ಷಾತೀತವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

‘ಇಂದಿನ ಯುವ ಪೀಳಿಗೆಗೆ ಶ್ರೀರಾಮನ ಆದರ್ಶಗಳು ಮಾರ್ಗದರ್ಶನವಾಗಿ ಅವುಗಳ ಆಚರಣೆಯೊಂದಿಗೆ ಅವರ ಭವಿಷ್ಯವು ಉಜ್ವಲವಾಗುತ್ತದೆ. ಅದಕ್ಕಾಗಿ ಈ ಸತ್ಕಾರ್ಯದಲ್ಲಿ ಅವರಿಗೂ ಅವಕಾಶ ಕಲ್ಪಿಸಬೇಕು’ ಎಂದು ಕೋರಿದರು.

ವೇದಿಕೆಯ ಮೇಲೆ ವಿಶ್ವ ಹಿಂದೂ ಪರಿಷತ್ತಿನ ಪ್ರಮುಖ ನಾರಾಯಣ ಮಠಾಧಿಕಾರಿ, ಮಲ್ಲಿಕಾರ್ಜುನ ಚುನಮರಿ, ಆನಂದ ಪಾಟೀಲ, ರಾಮಚಂದ್ರ ಕಾಕಡೆ, ಲಕ್ಷ್ಮೀ ದೇವಿ ಜಾತ್ರಾ ಕಮಿಟಿಯ ಪ್ರಭಾಕರ ಚೌಹಾಣ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.