ಭಾನುವಾರ, ಮೇ 29, 2022
30 °C

ರಾಮತೀರ್ಥನಗರ ಪಬ್ಲಿಕ್ ಶಾಲೆ ಮೇಲ್ದರ್ಜೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಉತ್ತರ ಮತಕ್ಷೇತ್ರ ವ್ಯಾಪ್ತಿಯ ಶಾಲೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ದೊರೆತಿದೆ’ ಎಂದು ಬಿಜೆಪಿ ಶಾಸಕ ಅನಿಲ ಬೆನಕೆ ತಿಳಿಸಿದ್ದಾರೆ.

ಈ ಬಗ್ಗೆ ಬುಧವಾರ ಪ್ರಕಟಣೆ ನೀಡಿರುವ ಅವರು, ‘ನಗರದ ಸರ್ದಾರ್‌ ಪ್ರೌಢಶಾಲೆ ಹಾಗೂ ಕಣಬರ್ಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶತಮಾನ ಪೂರೈಸಿರುವ ಹಿನ್ನೆಲೆಯಲ್ಲಿ ಅಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಕ್ರಮವಾಗಿ ₹ 15 ಲಕ್ಷ ಮತ್ತು ₹ 16.50 ಲಕ್ಷ ಅನುದಾನ ಮಂಜೂರಾಗಿದೆ’ ಎಂದು ಹೇಳಿದ್ದಾರೆ.

‘ಈ ಬಗ್ಗೆ ಸತತ ಪ್ರಯತ್ನ ನಡೆಸಿದ್ದೆ. ಅದಕ್ಕೆ ಸರ್ಕಾರ ಸ್ಪಂದಿಸಿದೆ. ರಾಮತೀರ್ಥ ನಗರದ ಸರ್ಕಾರಿ ಪಬ್ಲಿಕ್ ಶಾಲೆಯನ್ನು ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಾಗಿ ಉನ್ನತೀಕರಿಸಲು ಕೂಡ ಮಂಜೂರಾತಿ ಸಿಕ್ಕಿದೆ. ಇದರಿಂದ ಆ ಭಾಗದ ಬಡ ಕುಟುಂಬದ ವಿದ್ಯಾರ್ಥಿಗಳ ಹೆಚ್ಚಿನ ವ್ಯಾಸಂಗಕ್ಕೆ ಅನುಕೂಲವಾಗಲಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

‘ಕ್ಷೇತ್ರದಲ್ಲಿ ಸ್ಮಾರ್ಟ ಸಿಟಿ ಯೋಜನೆಯಲ್ಲಿ ₹ 2 ಕೋಟಿ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ₹ 70 ಲಕ್ಷದಲ್ಲಿ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ. ಕ್ಷೇತ್ರದ ಇನ್ನುಳಿದ ಎಲ್ಲ  ಶಾಲೆಗಳನ್ನೂ ಅಭಿವೃದ್ಧಿಪಡಿಸಲು ಯತ್ನಿಸುತ್ತೇನೆ‘ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು