ಮಂಗಳವಾರ, ಮಾರ್ಚ್ 21, 2023
20 °C

ರಮೇಶ ಜಾರಕಿಹೊಳಿ ಆರೋಪ ಮುಕ್ತರಾದರೆ ಮತ್ತೆ ಸಚಿವರಾಗಬಹುದು: ಅಣ್ಣಾಸಾಹೇಬ ಜೊಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೋಳೆ (ಬೆಳಗಾವಿ ಜಿಲ್ಲೆ): ‘ಗೋಕಾಕದ ಶಾಸಕ ರಮೇಶ ಜಾರಕಿಹೊಳಿ ಆರೋಪಮುಕ್ತರಾದರೆ ಮತ್ತೆ ಸಚಿವರಾಗಬಹುದು. ನಾವೇನೂ ಬೇಡ ಎನ್ನುವುದಿಲ್ಲ. ನಮ್ಮವರೆ ಸಚಿವರಾದರೆ ಒಳ್ಳೆಯದೆ’ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಸಾರ್ವಜನಿಕರಿಂದ ಅಹವಾಲು ಆಲಿಸಲು ಕಾಗವಾಡ ತಾಲ್ಲೂಕಿನ ನವಲಿಹಾಳ ಗ್ರಾಮಕ್ಕೆ ಬಂದಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದರು.

‘ಸಂಸದನಾದ ನಂತರ ಕೆಲವು ಗ್ರಾಮಗಳಿಗೆ ಭೇಟಿ ನೀಡಲು ಆಗಿರಲಿಲ್ಲ. ಹೀಗಾಗಿ ಕಾಗವಾಡ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಬಂದು ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕಾರ್ಯ ಮಾಡುತ್ತಿದ್ದೇನೆ. ಹಳ್ಯಾಳ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ನಾಲ್ವರು ಸಹೋದರರು ಮೃತರಾದರು. ಆ ಕುಟುಂಬದವರಿಗೆ ಸಾಂತ್ವನ ಹೇಳಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಪರಿಹಾರ ಕೊಡಿಸಲು ಪ್ರಯತ್ನಿಸುವೆ’ ಎಂದು ಭರವಸೆ ನೀಡಿದರು.

‘ಕಾತ್ರಾಳ ಗ್ರಾಮ ಮುಳಗಡೆ ಗ್ರಾಮವಾಗಿದ್ದು, ಆದಷ್ಟು ಬೇಗ ಸ್ಥಳಾಂತರಿಸಬೇಕು. 2019ರ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಇನ್ನು ಪರಿಹಾರ ಸಿಕ್ಕಿಲ್ಲ; ಕೊಡಿಸಿಕೊಡಬೇಕು’ ಎಂದು ಮುಖಂಡ ಸತೀಶ ಮುದವಿ ಕೋರಿದರು.

‘ಸಚಿವ ಶ್ರೀಮಂತ ಪಾಟೀಲ ಅವರೊಂದಿಗೆ ಚರ್ಚಿಸಿ ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸುವೆ’ ಎಂದು ಜೊಲ್ಲೆ ಭರವಸೆ ನೀಡಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಪಾಟೀಲ, ತಮ್ಮಣ್ಣ, ಸಚಿನ ದೇಸಾಯಿ, ರಮೇಶ ತೇಲಿ, ರವೀಂದ್ರ ಪೂಜಾರಿ, ಮೋಳೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಭೂತಾಳಿ ಥರಥರೆ, ಪಿಂಟು ಮುಂಜೆ, ಕಾತ್ರಾಳ ಗ್ರಾಮ ಪಂಚಾಯ್ತಿ ಸದಸ್ಯರಾದ ಬಸವರಾಜ ಮುದವಿ, ಸಂಜು ಮುದವಿ, ನವಲಿಹಾಳ ಗ್ರಾಮ ಪಂಚಾಯ್ತಿ ಸದಸ್ಯ ಸಾವಂತ ಖಾಂಡೇಕರ, ಸುರೇಶ ಪಾಟೀಲ, ಕಾಯಪ್ಪ ಬಿರುಣಗಿ, ಗಣಪತಿ ನಾಯಕ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು