ಬೆಳಗಾವಿ: ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮಹಾರಾಷ್ಟ್ರದ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿಯೂ ಆಗಿರುವ ದೇವೇಂದ್ರ ಫಡಣವಿಸ್ ಅವರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.

ನವದೆಹಲಿಯಲ್ಲಿ ಈ ಇಬ್ಬರು ನಾಯಕರು ತಾಸಿಗೂ ಹೆಚ್ಚಿನ ಸಮಯ ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆಯಂತೆ ಈ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದಲ್ಲಿರುವ ಶಿವಸೇನಾ ನೇತೃತ್ವದ ಸರ್ಕಾರವನ್ನು ಕೆಡವಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. ಕರ್ನಾಟಕದಲ್ಲಿ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಕೆಡವಿದ ರೀತಿಯ ಕಾರ್ಯತಂತ್ರವನ್ನು ಮಹಾರಾಷ್ಟ್ರದಲ್ಲೂ ಅಳವಡಿಸಿಕೊಳ್ಳುವ ಬಗ್ಗೆ ಈ ನಾಯಕರು ಸಮಾಲೋಚನೆ ನಡೆಸಿದ್ದಾರೆ.

ಈ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ಕೊಡುವುದಾಗಿ ರಮೇಶ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.