ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನಲ್ಲಿ ದೇವೇಂದ್ರ ಫಡಣವಿಸ್ ಭೇಟಿಯಾದ ರಮೇಶ ಜಾರಕಿಹೊಳಿ

Last Updated 21 ಜೂನ್ 2021, 15:24 IST
ಅಕ್ಷರ ಗಾತ್ರ

ಬೆಳಗಾವಿ: ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೆ ಮತ್ತು ತಮ್ಮ ವಿರುದ್ಧದ ಸಿ.ಡಿ. ಪ್ರಕರಣದಿಂದ ಮುಕ್ತರಾಗಲು ಕಸರತ್ತು ನಡೆಸುತ್ತಿರುವ ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ವಿಧಾನಸಭೆ ವಿರೋಧಪಕ್ಷದ ನಾಯಕ ದೇವೇಂದ್ರ ಫಡಣವಿಸ್ ಅವರನ್ನು ಸೋಮವಾರ ಭೇಟಿಯಾಗಿ ಚರ್ಚಿಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಮುಂಬೈನಲ್ಲಿ ಬೀಡು ಬಿಟ್ಟು ಅಲ್ಲಿನ ನಾಯಕರ ಮೂಲಕ ಪಕ್ಷದ ವರಿಷ್ಠರ ಮೇಲೆ ಪ್ರಭಾವ ಬೀರಲು ಮುಂದಾಗಿದ್ದಾರೆ.

ಮೊದಲಿಗೆ ಫಡಣವಿಸ್ ಅವರೊಂದಿಗೆ ಚರ್ಚಿಸಿದ್ದಾರೆ. ತಮ್ಮನ್ನು ಸಂಕಷ್ಟದಿಂದ ಪಾರು ಮಾಡುವಂತೆ ಕೋರಿದ್ದಾರೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಿಷಯವನ್ನು ವರಿಷ್ಠರ ಗಮನಕ್ಕೂ ತರುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT