ಮಂಗಳವಾರ, ಡಿಸೆಂಬರ್ 1, 2020
17 °C

‘ಅಭಿವೃದ್ಧಿ ಕಾರ್ಯಗಳಿಗೆ ಜನ ಮನ್ನಣೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಆರ್‌.ಆರ್‌. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಗೆಲುವು ಸಾಧಿಸಿರುವುದು ರಾಜ್ಯ ಸರ್ಕಾರದ ಅಭಿವೃದ್ಧಿ ಪರ ಕಾರ್ಯಕ್ರಮಗಳಿಗೆ ಜನ ಬೆಂಬಲ ಇರುವುದನ್ನು ಸೂಚಿಸುತ್ತದೆ’ ಎ‌ಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ‌ ಹೇಳಿದ್ದಾರೆ.

ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಈ ಫಲಿತಾಂಶವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಹಾಗೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಗಳ ಜನಪರ ಆಡಳಿತಕ್ಕೆ ಸಿಕ್ಕ ಮನ್ನಣೆಯಾಗಿದೆ. ಅಭಿವೃದ್ಧಿ ವಿಷಯ ಇಟ್ಟುಕೊಂಡು ನಾವು ಚುನಾವಣೆ ಎದುರಿಸಿದ್ದೆವು. ಮತದಾರರು ಅದನ್ನು ಒಪ್ಪಿ ಪಕ್ಷದ ಮೇಲೆ ವಿಶ್ವಾಸವಿಟ್ಟು ಮುನಿರತ್ನ ಮತ್ತು ಡಾ.ರಾಜೇಶ್‌ ಗೌಡ ಅವರನ್ನು ಗೆಲ್ಲಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಸಂಜಯ ಹರ್ಷ

ಬೆಳಗಾವಿ: ಆರ್‌.ಆರ್‌. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಗೆಲುವು ಸಾಧಿಸಿರುವುದಕ್ಕೆ ಪಕ್ಷದ ಜಿಲ್ಲಾ ಘಟಕದ ಆಧ್ಯಕ್ಷ ಸಂಜಯ ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.

ಹೇಳಿಕೆ ನೀಡಿರುವ ಅವರು, ‘ಬಿಹಾರ, ಮಧ್ಯಪ್ರದೇಶ ಇನ್ನಿತರ ರಾಜ್ಯಗಳ ಚುನಾವಣೆ ಹಾಗೂ ಉಪ ಚುನಾವಣೆಗಳಲ್ಲಿ ಬಿಜೆಪಿಯು ಭರ್ಜರಿಯಾಗಿ ಜಯ ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಉತ್ತಮವಾಗಿ ಬೆಳವಣಿಗೆ ಹೊಂದುತ್ತಿದೆ. ಈ  ಗೆಲುವು ಸಾಧಿಸಲು ಕಾರಣಕರ್ತರಾದ ಕಾರ್ಯಕರ್ತರು ಹಾಗೂ ಜನರಿಗೆ ಗೆಲುವು ಸಮರ್ಪಿತವಾಗಿದೆ. ನಮ್ಮ ಸಾಮಾಜಿಕ ಜವಾಬ್ದಾರಿಯೂ ಹೆಚ್ಚಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ಇನ್ನೂ ಹೆಚ್ಚಿನದನ್ನು ಸಾಧಿಸಲು ಅನುಕೂಲವಾಗಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು