ಭಾನುವಾರ, ಆಗಸ್ಟ್ 14, 2022
26 °C

ರಮೇಶಗೆ ಸಚಿವ ಸ್ಥಾನಕ್ಕೆ ಆಗ್ರಹ: ಒಂಟೆ ಏರಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು' ಎಂದು ಆಗ್ರಹಿಸಿ ಘಟಪ್ರಭಾದ ಅವರ ಬೆಂಬಲಿಗರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಒಂಟೆಗಳ ಮೇಲೆ ಮೆರವಣಿಗೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು.

‘ನಮ್ಮ ನಾಯಕರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಅವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಕೆಲಸಗಳು ತೆರೆ–ಮರೆಯಲ್ಲಿ ನಡೆಯುತ್ತಿವೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಹೆಸರು ಕೆಡಿಸುವಂತಹ ಪ್ರಯತ್ನಗಳನ್ನು ಕೆಲವರು ಮಾಡುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು ನಿರಾಧಾರವಾಗಿವೆ. ಹೀಗಾಗಿ, ಬಿಜೆಪಿ ಹೈಕಮಾಂಡ್‌ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಮುಖಂಡರಾದ ಅಶೋಕಕುಮಾರ ಅಸೋದೆ, ಶಿವಾನಂದ ಚೌಕಸಿ ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು