ಬೆಳಗಾವಿ: ರಮೇಶ ಜಾರಕಿಹೊಳಿ ಅವರ ರಾಜೀನಾಮೆ ಅಂಗಿಕರಿಸಿದಂತೆ ಆಗ್ರಹಿಸಿ ಗೋಕಾಕ ನಗರದಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಅಂಗೀಕರಿಸಿದಲ್ಲಿ ಬೆಳಗಾವಿ ಜಿಲ್ಲೆ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ.. ಲೈಂಗಿಕ ದುರ್ಬಳಕೆ, ವಂಚನೆ ಆರೋಪ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ

ಗೋಕಾಕದ ಬಸವೇಶ್ವರ ವೃತ್ತದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣದಿಂದ ನೈತಿಕ ಹೊಣೆ ಹೊತ್ತು ರಾಜಿನಾಮೆ ಸಲ್ಲಿಸಿದ್ದಾರೆಯೇ ವಿನಃ ಅವರು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಈ ನಡುವೆ ರಮೇಶ ಬೆಂಬಲಿಗನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೂ ನಡೆದಿದೆ. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗೋಕಾಕದಲ್ಲಿ ರಮೇಶ ಬೆಂಬಲಿಗರು ಕೆಲವು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಕೆಲವರು ಸ್ವಯಂಪ್ರೇರಿತವಾಗಿ ಬಾಗಿಲು ಹಾಕಿಕೊಂಡು ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.