ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮೇಶ–ಆರ್‌ಎಸ್‌ಎಸ್ ಮುಖಂಡ ದೇಶಪಾಂಡೆ ಚರ್ಚೆ

Last Updated 15 ಜನವರಿ 2022, 12:31 IST
ಅಕ್ಷರ ಗಾತ್ರ

ಅಥಣಿ: ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಪಟ್ಟಣದ ಆರ್‌ಎಸ್‌ಎಸ್‌ ಮುಖಂಡ ಅರವಿಂದರಾವ ದೇಶಪಾಂಡೆ ಅವರನ್ನು ಇಲ್ಲಿನ ನಿವಾಸದಲ್ಲಿ ಶನಿವಾರ ಭೇಟಿಯಾಗಿ ಗಂಟೆಗೂ ಹೆಚ್ಚು ಸಮಯ ರಹಸ್ಯವಾಗಿ ಚರ್ಚೆ ನಡೆಸಿದರು.

ಬಳಿಕ ಮಾಧ್ಯಮ ‍ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಇದೊಂದು ಸೌಹಾರ್ದ ಭೇಟಿ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಈ ಕಡೆ ಬಂದಾಗಲೆಲ್ಲಾ ಹಿರಿಯರನ್ನು ಭೇಟಿ ಆಗುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

‘ಸಚಿವ ಸ್ಥಾನ ಪಡೆಯುವ ಬಗ್ಗೆ ನಾನು ಹೆಚ್ಚು ಒತ್ತು ನೀಡಿಲ್ಲ. ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ದುಡಿಯುತ್ತೇನೆ. ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಹೈಕಮಾಂಡ್‌ಗೆ ತಿಳಿಸಿದ್ದೇನೆ. ವರಿಷ್ಠರ ತೀರ್ಮಾನಕ್ಕೆ ನಾವು ಬದ್ಧವಾಗಿರುತ್ತೇವೆ‘ ಎಂದರು.

‘ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂಬರುವ ವಿಧಾನಸಭೆ ಚುನಾವಣೆಯನ್ನು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಎದುರಿಸುತ್ತೇವೆ’ ಎಂದು ಹೇಳಿದರು.

ರಮೇಶ ಮತ್ತೆ ಸಚಿವ ಸ್ಥಾನ ಪಡೆಯುವುದಕ್ಕಾಗಿ ಆರ್‌ಎಸ್‌ಎಸ್‌ ಮುಖಂಡರ ಮೂಲಕ ಒತ್ತಡ ತರುತ್ತಿದ್ದಾರೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT