ಶನಿವಾರ, ಮೇ 15, 2021
24 °C

ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ ಬೆಂಬಲಿಗರಿಂದ ಡಿಕೆಶಿ ಕಾರಿನ ಮೇಲೆ ಚಪ್ಪಲಿ ಎಸೆತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಿಂದ ನಗರದತ್ತ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಾಹನಕ್ಕೆ ಮುತ್ತಿಗೆ ಹಾಕಲು ರಮೇಶ ಜಾರಕಿಹೊಳಿ ಬೆಂಬಲಿಗರು ಯತ್ನಿಸಿದರು. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಡಿ.ಕೆ. ಶಿವಕುಮಾರ್ ಅವರ ಕಾರಿಗೆ ಕೆಲವರು ಚಪ್ಪಲಿಯನ್ನೂ ತೂರಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ   ಪ್ರತಿಭಟನಾನಿರತರನ್ನು ತಡೆದರು. ಕಾರಿನತ್ತ ನುಗ್ಗದಂತೆ ತಡೆದರು.

ಕಪ್ಪು ಬಾವುಟ ಹಿಡಿದು ನೂರಾರು ಮಂದಿ ಪ್ರತಿಭಟನಾಕಾರರು ಪಾಲ್ಗೊಂಡಿದ್ದರು.

ಇದನ್ನೂ ಓದಿ... ಸಿ.ಡಿ ಪ್ರಕರಣ: ಡಿಕೆ ಶಿವಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಗೋಕಾಕದಲ್ಲಿ ಪ್ರತಿಭಟನೆ

ಶಿವಕುಮಾರ್ ವಾಹನ‌ಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಡಿಕೆಶಿ ವಾಹನದ ಹಿಂದೆ ಹೋಗುತ್ತಿದ್ದ ವಾಹನಕ್ಕೆ ಕೆಲವರು ಕೈಯ್ಯಿಂದ ಬಡಿದರು. ಈ ವೇಳೆ ಸಫಾರಿ ಧರಿಸಿದ್ದ ಪೊಲೀಸರೊಬ್ಬರು ನಮ್ಮ ಮೇಲೆ ಹಲ್ಲೆ ನಡೆಸಿದರು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಟ್ಟಾಡಿಸಿಕೊಂಡು ಹೋಗಿ ಥಳಿಸಿದರು. ಅವರನ್ನು ರಕ್ಷಿಸಿಕೊಳ್ಳಲು ಪೊಲೀಸರು ಹರಸಾಹಸ ಪಟ್ಟರು. ಈ ವೇಳೆ ಓಡುತ್ತಿದ್ದ ಗುಂಪಿನಲ್ಲಿದ್ದ ಹಲವರು ಮುಗ್ಗರಿಸಿ ಬಿದ್ದ ಘಟನೆಯೂ ನಡೆಯಿತು.

ಇದನ್ನೂ ಓದಿ... ಬೆಳಗಾವಿ ಲೋಕಸಭಾ ಕ್ಷೇತ್ರ: ‘ಕರಿ’ಯಂದು ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು